ಪ್ರತಿ ಕೆಲಸಕ್ಕೆ ರೇಟ್‌ ಫಿಕ್ಸ್‌ ಆಗಿರುವ ಸರ್ಕಾರದಲ್ಲಿ ಪ್ರತಿ ಸಹಿಯೂ ಮಾರಾಟಕ್ಕಿದೆ: ಕುಮಾರಸ್ವಾಮಿ

Sampriya

ಶುಕ್ರವಾರ, 10 ಜನವರಿ 2025 (17:26 IST)
ಬೆಂಗಳೂರು: ರಾಜ್ಯದಲ್ಲಿ ಇದೀಗ ಎಲ್ಲ ಸರ್ಕಾರ ಕೆಲಸಕ್ಕೆ ರೇಟ್ ಫಿಕ್ಸ್‌ ಆಗಿದ್ದಲ್ಲದೆ, ಸರ್ಕಾರದ ಪ್ರತಿ ಸಹಿಯೂ ಮಾರಾಟಕ್ಕೆ  ಇದೆ ಎಂದು ಕೇಂದ್ರ ಸಚಿವ  ಎಚ್ ಡಿ ಕುಮಾರಸ್ವಾಮಿ ಅವರು ಲೇವಡಿ ಮಾಡಿದ್ದಾರೆ.  

ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 60 ಪರ್ಸಂಟೇಜ್‌ ಕಮೀಷನ್ ಆರೋಪಕ್ಕೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಕೇಳುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು, ಗುತ್ತಿಗೆದಾರರೇ ಈ ಆರೋಪ ಮಾಡುತ್ತಿದ್ದಾರೆ. ಸರ್ಕಾರ ಅವರನ್ನೇ ಕೇಳಿ ದಾಖಲೆ ಪಡೆದುಕೊಳ್ಳಲಿ ಎಂದು ತಿರುಗೇಟು ನೀಡಿದರು.

ಸಿದ್ದರಾಮಯ್ಯ ಮಹಾನ್ ನಾಯಕರು. ಪೇಸಿಎಂ ಅಂತ ಪೋಸ್ಟರ್ ಅಂಟಿಸಲು ಹೋಗಿದ್ದರು. ಅವರು ಇಲ್ಲಿಯವರೆಗೆ ಜನರ ಮುಂದೆ ಯಾವ ದಾಖಲೆ ಇಟ್ಟಿದ್ದಾರೆ? ಕೆಂಪಣ್ಣ ಹೇಳಿದರು, ಕೆಂಪಣ್ಣ ಹೇಳಿದರು ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಕೆಂಪಣ್ಣ ಅವರಿಂದ ಅವರು ದಾಖಲೆ ಪಡೆದುಕೊಳ್ಳಬೇಕಿತ್ತಲ್ಲವೇ? ಕಮಿಷನ್‌ ಕೇಳದೇ ಇದ್ದರೆ ಈಗ ಗುತ್ತಿಗೆದಾರರು ಏಕೆ ಆರೋಪ ಮಾಡುತ್ತಿದ್ದರು ಎಂದು ಪ್ರಶ್ನಿಸಿದರು.

ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ. ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ ಗಳಿಗೂ ರೇಟ್ ನಿಗದಿ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಮಹಾನ್ ನಾಯಕರು. ಪೇ ಸಿಎಂ ಅಂತ ಪೋಸ್ಟರ್ ಅಂಟಿಸಲು ಹೋಗಿದ್ದರು. ಜನರ ಮುಂದೆ ಅವರು ಇದುವರೆಗೆ ಯಾವ ದಾಖಲೆ ಇಟ್ಟಿದ್ದಾರೆ. ‌

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ