ಸುಪ್ರೀಂಕೋರ್ಟ್‌ನಿಂದ ಕಾವೇರಿ ನೀರು ಹರಿಸುವ ಆದೇಶ ಮುಂದುವರಿಕೆ
ಮಂಗಳವಾರ, 21 ಮಾರ್ಚ್ 2017 (16:10 IST)
ತಮಿಳುನಾಡಿಗೆ ಪ್ರತಿನಿತ್ಯ ಎರಡು ಸಾವಿರ ಕ್ಯೂಸೆಕ್ಸ್ ನೀರು ಹರಿಸಿ ಆದೇಶ ಮುಂದುವರಿಸುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಸರಕಾರಕ್ಕೆ ಸೂಚನೆ ನೀಡಿದೆ.
ಜನವರಿ 4 ರಂದು ಸುಪ್ರೀಂಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ಆದೇಶವನ್ನು ಮುಂದುವರಿಸುವಂತೆ ಕೋರ್ಟ್ ಆದೇಶ ನೀಡಿದೆ.
ಸುಪ್ರೀಂಕೋರ್ಟ್ ಜನವರಿ 4 ರಂದು ನೀಡಿದ ಆದೇಶದಂತೆ ಕರ್ನಾಟಕ ತಮಿಳುನಾಡಿಗೆ ನೀರು ಬಿಟ್ಟಿಲ್ಲ. ತಮಿಳುನಾಡಿಗೆ ಬಿಡುವ ನೀರನ್ನು ನೀರಾವರಿಗಾಗಿ ಬಳಸಿಕೊಳ್ಳುತ್ತಿದೆ ಎಂದು ತಮಿಳುನಾಡು ಪರ ವಕೀಲರು ಕೋರ್ಟ್ ಗಮನ ಸೆಳೆದರು.
ತಮಿಳುನಾಡು ಪರ ವಕೀಲರ ವಾದವನ್ನು ತಳ್ಳಿಹಾಕಿದ ಕರ್ನಾಟಕ ಪರ ವಕೀಲ ನಾರಿಮನ್, ಕರ್ನಾಟಕ ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆ ಎದುರಿಸುತ್ತಿರುವುದರಿಂದ ತಮಿಳುನಾಡಿಗೆ ನೀರು ಬಿಡಲು ಅಡ್ಡಿಯಾಗುತ್ತಿದೆ ಎಂದು ವಾದ ಮಂಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.