‘ಎಲ್ಲರೂ ಎಚ್ಚರಿಕೆಯಿಂದಿರಿ’- ಡಿಸಿ
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರ ಪಾಲನೆ ಮಾಡಬೇಕೆಂದು ಸರ್ಕಾರ ಹೊಸ ನಿರ್ದೇಶನ ನೀಡಿದೆ.. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಉಡುಪಿ ಡಿಸಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ. ಕುಂದಾಪುರ ತಾ.ಪಂ. ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಹೊಸ ನಿರ್ದೇಶನವನ್ನು ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಮೈಗೂಡಿಸಿಕೊಳ್ಳಬೇಕು.. ಜಿಲ್ಲೆಯಲ್ಲಿ ನೂರಕ್ಕೆ ನೂರು ಪ್ರತಿಶತ ಜನ ಮೊದಲ ಡೋಸ್ ಪಡೆದಿದ್ದಾರೆ. ಶೇ. 98.5 ಜನರು ಎರಡನೇ ಡೋಸ್ ಪಡೆದಿದ್ದಾರೆ. ಅರ್ಹರು ಮುನ್ನೆಚ್ಚರಿಕಾ ಡೋಸ್ ಕೂಡ ಪಡೆಯಬೇಕು. ಕೊರೋನಾ ಲಕ್ಷಣಗಳಿದ್ದವರು ಪರೀಕ್ಷೆ ಮಾಡಿಸಿಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮವಹಿಸಿ, ಐಸೋಲೇಶನ್ ಮೊದಲಾದ ಪ್ರಕ್ರಿಯೆಗಳಿಗೆ ಒಳಪಡಬೇಕು ಎಂದ ಸೂಚನೆ ನೀಡಿದ್ರು.