ಪಾಕಿಸ್ತಾನ ಇಸ್ಲಾಂ ರಾಷ್ಟ್ರ ಎಂದು ಘೋಷಿಸಿಕೊಂಡು ಏನಾಗಿದೆ ಎಂದು ಎಲ್ಲರಿಗೂ ಗೊತ್ತು: ದಿಗ್ವಿಜಯ್ ಸಿಂಗ್

ಮಂಗಳವಾರ, 15 ಆಗಸ್ಟ್ 2023 (14:53 IST)
ಹುಬ್ಬಳ್ಳಿ : ಪಾಕಿಸ್ತಾನ ಇಸ್ಲಾಂ ರಾಷ್ಟ್ರ ಎಂದು ಘೋಷಿಸಿಕೊಂಡ ನಂತರ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅಲ್ಲಿ ಮುಸಲ್ಮಾನರೆ ಮುಸಲ್ಮಾನರನ್ನು ಹೊಡೆದು ಹಾಕುತ್ತಿದ್ದಾರೆ. ಭಾರತದಲ್ಲಿ ಹಿಂದೂ ರಾಷ್ಟ್ರದ ಪ್ರಶ್ನೆಯೇ ಇಲ್ಲ. ಈ ದೇಶ ಎಲ್ಲರಿಗೂ ಸೇರಿದ್ದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಭಾರತ ಹಿಂದೂ ರಾಷ್ಟ್ರ ಎಂಬ ಕಮಲಾನಾಥ್ ಹೇಳಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಭಾರತೀಯ ಸಂವಿಧಾನದಲ್ಲಿ ಎಲ್ಲ ವ್ಯಕ್ತಿಗಳಿಗೂ ತನ್ನ ಧರ್ಮ ಪಾಲನೆಗೆ ಅವಕಾಶವಿದೆ. ಭಾರತದಲ್ಲಿ ಸಂವಿಧಾನವೇ ಸರ್ವಸ್ವ ಆಗಿದೆ. ಆದರೆ ಹಿಂದೂಗಳ ಜನಸಂಖ್ಯೆ ಇಲ್ಲಿ ಹೆಚ್ಚಿದೆ ಎಂದಿದ್ದಾರೆ. 

ಎಲ್ಲಾ ಧರ್ಮಿಯರು ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ. ಹಿಂದುತ್ವದ ವಿಚಾರದಲ್ಲಿ ಸಾಫ್ಟ್ ಅಥವಾ ಹಾರ್ಡ್ ಎಂಬ ಪ್ರಶ್ನೆಯೇ ಇಲ್ಲ. ನೇಪಾಳದ ಜನಸಂಖ್ಯೆಯಲ್ಲಿ ಅತಿ ಹೆಚ್ಚು ಹಿಂದುಗಳೇ ಇದ್ದಾರೆ. ಆದರೂ ನೇಪಾಳ ಹಿಂದೂ ರಾಷ್ಟ್ರ ಎಂದು ಘೋಷಿಸಿಕೊಂಡಿಲ್ಲ. ಸೆಕ್ಯುಲರ್ ಸಂವಿಧಾನ ಅಳವಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ