ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತು ಪ್ರತಿಕ್ರಿಯೆ ನೀಡಲು ಇಚ್ಚಿಸುವುದಿಲ್ಲ: ಬಿಎಸ್‌ವೈ

ಶುಕ್ರವಾರ, 19 ಆಗಸ್ಟ್ 2016 (09:42 IST)
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಘಟನೆ ಸ್ಥಾಪಣೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಈ ಕುರಿತು ಮತ್ತೇನನ್ನೂ ಹೇಳುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. 
 
 ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನು ಬೇಕಾದರೂ ಮಾಡಲಿ. ಈ ಕ್ಷಣದಿಂದ ಇಂತಹ ಯಾವುದೇ ವಿಷಯಕ್ಕೂ ನಾನು ಪ್ರತಿಕ್ರಿಯೆ ನೀಡಲು ಇಷ್ಟಪಡುವುದಿಲ್ಲ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಘಟನೆ ಸ್ಥಾಪಣೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು. 
 
ಇಲ್ಲಿ ಎಲ್ಲರೂ ಸ್ವತಂತ್ರರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಘಟನೆ ಸ್ಥಾಪಣೆ ಅವರ ವಿವೇಚನೆಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ನಮ್ಮ ಸರಕಾರವಿದ್ದಾಗ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಿಕೊಟ್ಟಿದ್ದೇವೆ. ಮುಂದಿನ ಚುನಾವಣೆಯಲ್ಲಿ 150 ಕ್ಕೂ ಹೆಚ್ಚು ಸ್ಥಾನ ಗೆದ್ದು ಅಧಿಕಾರಕ್ಕೆ ಬರುವುದಷ್ಟೇ ನಮ್ಮ ಗುರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ