ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತೆ-ಡಾ‌.ಜಿ.ಪರಮೇಶ್ವರ್

geetha

ಗುರುವಾರ, 11 ಜನವರಿ 2024 (15:23 IST)
ಬೆಂಗಳೂರು-ಕಾಂಗ್ರೆಸ್‌ ಸರ್ಕಾರದಲ್ಲಿ ಮೂರು ಡಿಸಿಎಂ ಬೇಕು ಎಂಬ ಕೂಗು ಹೆಚ್ಚಾಗುತ್ತಲ್ಲೇ ಇದೆ. ಲೋಕಸಭಾ ಚುನಾವಣೆಗೂ ಮುನ್ನ ಹೆಚ್ಚುವರಿ ಡಿಸಿಎಂ ಮಾಡಿದರೆ ಒಳ್ಳೆಯದಾಗುತ್ತದೆ ಅಂತಾ ಸಚಿವ ಕೆಎನ್ ರಾಜಣ್ಣ ಪುನರುಚ್ಚರಿಸಿದ್ದಾರೆ. ರಾಹುಲ್‌ ಗಾಂಧಿ ಭೇಟಿ ಮಾಡಲು ದೆಹಲಿಗೆ ತೆರಳುವ ಮುನ್ನ ಅವರು ಹೆಚ್ಚುವರಿ ಡಿಸಿಎಂ ಆಯ್ಕೆ ಬಗ್ಗೆ ಮತ್ತೆ ಮಾತೆತ್ತಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಈಗಾಗಲೇ ಹೈಕಮಾಂಡ್​ಗೆ ಸಲಹೆ ನೀಡಿದ್ದೇವೆ .ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ಧರಿರುವುದಾಗಿ ಹೇಳಿದರು.

ಡಿಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ಮುಂದೆ ಪ್ರಸ್ತಾಪ ವಿಚಾರ ಕುರಿತು ಸಚಿವ ಡಾ‌.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏನು ಆಗುತ್ತೆ, ಏನು ಮಾಡ್ತಾರೆ ಗೊತ್ತಿಲ್ಲ. ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡ್ತಾರೆ. ಕೆ.ಎನ್.ರಾಜಣ್ಣ ಮೊದಲಿಂದ ಹೇಳುತ್ತಿದ್ದಾರೆ.. ಯಾಕೆ ಕೇಳುತ್ತಿದ್ದಾರೆ ಎಂದು ರಾಜಣ್ಣ ವಿವರಣೆ ಕೊಟ್ಟಿದ್ದಾರೆ. ಆಯಾ ಸಮುದಾಯಗಳು ಅಧಿಕಾರದಲ್ಲಿ ಪಾಲುದಾರರು. ನಾವು ಲೋಕಸಭೆಯಲ್ಲಿ ಮತ ಹಾಕಬೇಕು ಎಂಬರ್ಥದಲ್ಲಿ ಹೇಳಿದ್ದಾರೆ.. ಅದರ ಬಗ್ಗೆ ಎಐಸಿಸಿ ಅಧ್ಯಕ್ಷರೇ ಹೇಳಿದ್ದಾರೆ. ಅವರೇ ಹೇಳಿದ ಮೇಲೆ ಅವರಂತೆ ಹೋಗಬೇಕಲ್ಲ.. ಇವತ್ತು ಅಧ್ಯಕ್ಷರು, ರಾಹುಲ್ ಗಾಂಧಿ ಅವರು ಸಭೆ ತೆಗೆದುಕೊಳ್ಳುತ್ತಾರೆ. ಅಲ್ಲಿ ಏನು ಚರ್ಚೆ ಆಗುತ್ತದೆ ಎಂದು ಹೇಳಲು ಆಗುವುದಿಲ್ಲ ಎಂದ್ರು.

ಇಂದು ನಡೆಯಲಿರುವ ಎಐಸಿಸಿ ಸಭೆಯ ವಿಚಾರವಾಗಿ ಬೆಂಗಳೂರಿನಲ್ಲಿ ಡಾ.ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ.. ವರಿಷ್ಠರು ಸಭೆಯನ್ನ ಕರೆದಿದ್ದಾರೆ, ಅಜೆಂಡಾ ಏನು ಅಂತ ಗೊತ್ತಿಲ್ಲ..ಅವರವರು ಜವಾಬ್ದಾರಿ ತೆಗೆದುಕೊಳ್ಳಬೇಕು. ಅಲ್ಲಿ ಹೋದ ಮೇಲೆ ಏನು ನಿರ್ದೇಶನ ಬರುತ್ತೋ ಗೊತ್ತಿಲ್ಲ. ಅನೇಕ ವಿಚಾರಗಳು ಬರುತ್ತವೆ.. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಬೇಕು ಎಂದು ಈಗಾಗಲೇ ಹೇಳಿದ್ದಾರೆ. ಹೈಕಮಾಂಡ್ ಕೊಡುವ ನಿರ್ದೇಶನದ ಪ್ರಕಾರ ನಾವೆಲ್ಲ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ