ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ ಎಸ್.ಎಂ.ಕೃಷ್ಣ

ಶನಿವಾರ, 28 ಜನವರಿ 2017 (17:44 IST)
ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದಲ್ಲಿ ತಮ್ಮ ಹಿರಿತನವನ್ನು ನಿರ್ಲಕ್ಷಿಸಿರುವ ಹಿನ್ನೆಲೆಯಲ್ಲಿ ಬೇಸರಕೊಂಡಿದ್ದ ಎಸ್.ಎಂ.ಕೃಷ್ಣ ಅವರು ಇಂದು ಮುಂಜಾನೆ 11 ಗಂಟೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. 
 
ಸಿಎಂ ಸಿದ್ದರಾಮಯ್ಯ ಹಾಗೂ ಮತ್ತಿತ್ತರ ಮುಖಂಡರ ನಡವಳಿಗೆಯ ವಿರುದ್ಧ ಎಸ್'ಎಂ'ಕೆ ಅಸಮಧಾನಗೊಂಡಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. 
 
ಈ ಸಂಬಂಧ ನಾಳೆ ಬೆಳಿಗ್ಗೆ 11 ಗಂಟೆಗೆ ತುರ್ತು ಪತ್ರಿಕಾಗೋಷ್ಠಿ ನಡೆಸಲಿದ್ದು, ಎಸ್‌.ಎಂ.ಕೃಷ್ಣ ಅವರು ರಾಜ್ಯದಲ್ಲಿ 1999 ರಿಂದ 2004 ರವರೆಗೆ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗಿದ್ದರು. ಮಹಾರಾಷ್ಟ್ರದಲ್ಲಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ