DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಮರ್ಡರ್: ಪತ್ನಿ ಪಲ್ಲವಿ ಅರೆಸ್ಟ್
ನಿವೃತ್ತ ಡಿಜಿಪಿ ಓಂ ಪ್ರಕಾಶ್ ತಮ್ಮ ಮನೆಯಲ್ಲೇ ಬರ್ಬರವಾಗಿ ಹತ್ಯೆಯಾಗಿದ್ದರು. ತೀವ್ರ ರಕ್ತದ ಮಡುವಿನಲ್ಲಿ ಬಿದ್ದು ಸುಮಾರು 15 ನಿಮಿಷ ಒದ್ದಾಡಿ ಪ್ರಾಣ ಬಿಟ್ಟಿದ್ದರು. ಅವರಿಗೆ ಚಾಕುವಿನಿಂದ ಇರಿಯಲಾಗಿತ್ತು.
ಪ್ರಕರಣದಲ್ಲಿ ಅವರ ಪತ್ನಿ ಪಲ್ಲವಿಯ ಹೆಸರು ಬಲವಾಗಿ ಕೇಳಿಬಂದಿತ್ತು. ಹೀಗಾಗಿ ಪಲ್ಲವಿ ಮತ್ತು ಪುತ್ರಿ ಕೃತಿಯನ್ನು ಪೊಲೀಸರು ನಿನ್ನೆಯೇ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ನಡೆದ ಘಟನೆಯನ್ನು ಆಕೆ ಬಾಯ್ಬಿಟ್ಟಿದ್ದಾರೆ. ಪತಿಯನ್ನು ಕೊಲೆ ಮಾಡಿರುವುದಕ್ಕೆ ಕಾರಣವನ್ನೂ ಹೇಳಿದ್ದಾರೆ. ನಮ್ಮನ್ನು ಶೂಟ್ ಮಾಡುವುದಾಗಿ ಹೆದರಿಸುತ್ತಿದ್ದರು. ಹೀಗಾಗಿ ನಮ್ಮ ಆತ್ಮರಕ್ಷಣೆಗೆ ಚಾಕುವಿನಿಂದ ಇರಿದಿರುವುದಾಗಿ ಹೇಳಿದ್ದರು.
ಇದೀಗ ಎಚ್ಎಸ್ಆರ್ ಠಾಣೆ ಪೊಲೀಸರು ಅಧಿಕೃತವಾಗಿ ಪಲ್ಲವಿಯನ್ನು ಅರೆಸ್ಟ್ ಮಾಡಿದ್ದಾರೆ. ಪ್ರಕರಣದಲ್ಲಿ ಅವರ ಪುತ್ರಿಯ ಪಾತ್ರದ ಬಗ್ಗೆ ತನಿಖೆ ಮುಂದುವರಿದಿದೆ.