ಮಾಜಿ ಗೃಹ ಸಚಿವ ಜಾರ್ಜ್ ಕೊಲೆಗಡುಕ: ಕೆ.ಎಸ್.ಈಶ್ವರಪ್ಪ

ಶುಕ್ರವಾರ, 8 ಜುಲೈ 2016 (14:54 IST)
ಮಂಗಳೂರು ಡಿವೈಎಸ್‌ಪಿ ಗಣಪತಿ ಅತ್ಮಹತ್ಯೆ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ಮಾಜಿ ಗೃಹ ಸಚಿವ ಜಾರ್ಜ್ ಕೊಲೆಗಡುಕ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
 
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ಹೆಸರು ಕೇಳಿಬರುತ್ತಿದ್ದು, ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
 
ಸೋಮವಾರಪೇಟೆಯ ರಂಗಸಮುದ್ರದ ಗ್ರಾಮದ ಗಣಪತಿ ಅವರಿಗೆ ಬೆಂಗಳೂರಿನ ಐಜಿ ಕಚೇರಿಗೆ ವರ್ಗಾವಣೆಯಾಗಿತ್ತು. ಡಿವೈಎಸ್‌ಪಿ ಗಣಪತಿ ಅವರು ನಿನ್ನೆ ಸಂಜೆ ಮಡಿಕೇರಿಯ ವಿನಾಯಕ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. 
 
ಮಂಗಳೂರು ಡಿವೈಎಸ್‌ಪಿ ಗಣಪತಿ ಅವರು ಆತ್ಮಹತ್ಯೆಗೆ ಮುನ್ನ ಖಾಸಗಿ ಸುದ್ದಿವಾಹಿನಿಯ ಜೊತೆ ಮಾತನಾಡಿದ್ದು, ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಪ್ರಕರಣವೊಂದರ ಸಂಬಂಧ ನನಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ