ಸಿಎಂ ಸಮ್ಮುಖದಲ್ಲಿಯೇ ಖಮರುಲ್‌ರಿಂದ ಅಧಿಕಾರಿಗಳ ತರಾಟೆ

ಶನಿವಾರ, 17 ಸೆಪ್ಟಂಬರ್ 2016 (16:48 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎದುರಲ್ಲೇ ಮಾಜಿ ಸಚಿವ ಖಮರುಲ್ ಇಸ್ಲಾಂ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಕಲಬುರ್ಗಿಯ ಐವಾನ್ ಶಾಹಿ ಅತಿಥಿ ಗೃಹದಲ್ಲಿ ವರದಿಯಾಗಿದೆ. 
 
ಕಲಬುರ್ಗಿ ನಗರದ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದ ನಂತರ ರಾಜ್ಯ ಸಚಿವ ಸಂಪುಟದಲ್ಲಿ ಖಮರುಲ್ ಇಸ್ಲಾಂ ಅವರಿಗೆ ಮರುಸೇರ್ಪಡೆ ಮಾಡಿಕೊಳ್ಳುವಂತೆ ಅವರ ಬೆಂಬಲಿಗರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲು ಬಂದಿದ್ದರು. ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲನ್ ಬಿಸ್ವಾಸ್ ಮತ್ತು ಎಸ್‌ಪಿ ಶಶಿಕುಮಾರ್ ಅವರು ಮುಖ್ಯಮಂತ್ರಿಯವರ ಭೇಟಿಗೆ ಅಡ್ಡಿಪಡಿಸಿದ್ದರೆಂಬ ಕಾರಣಕ್ಕೆ ಖಮರುಲ್ ಇಸ್ಲಾಂ ಆಕ್ರೋಶಗೊಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
 
ಈ ವೇಳೆ ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಖಮರುಲ್ ಇಸ್ಲಾಂ ಹಾಗೂ ಅವರ ಬೆಂಬಲಿಗರನ್ನು ಸಮಾಧಾನಪಡಿಸಿ ವಾತಾವರಣ ತಿಳಿಗೊಳಿಸಿದರು
 
ತದನಂತರ ಅತಿಥಿ ಗೃಹದ ಹೊರ ಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅಹವಾಲು ಸ್ವೀಕರಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ