ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 224 ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲೂ ಸಾಲ ಯೋಜನೆ ಮಾಡಿಲ್ಲ. ಆದರೆ, ನಂಜನಗೂಡಿನಲ್ಲಿ ಮಾತ್ರ ಸಾಲ ಯೋಜನೆ ಜಾರಿ ಮಾಡಿದ್ದಾರೆ. ಈ ಮೂಲಕ ಉಪಚುನಾವಣೆ ಎದುರಿಸುತ್ತಿದ್ದೀರಾ? ಎಂದು ಪ್ರಶ್ನಿಸಿದರು.
ತಮ್ಮನ್ನು ಸಚಿವ ಸಂಪುಟದಿಂದ ಕೈಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು, ಕಾಂಗ್ರೆಸ್ ಪಕ್ಷದಿಂದ ನಿರ್ಗಮಿಸಿದ್ದಲ್ಲದೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ರಾಜೀನಾಮೆ ಬೆನ್ನೆಲೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಸಾದ್‌ರನ್ನು ಸೇಳೆಯಲು ಕಸರತ್ತು ನಡೆಸಿದ್ದರು. ಆದರೆ, ಅವರು ಅಂತಿಮವಾಗಿ ಬಿಜೆಪಿ ಸೇರ್ಪಡೆಯಾಗುವ ನಿರ್ಧಾರ ಕೈಗೊಂಡಿರು.