ಈ ಕುರಿತು ನಿನ್ನೆ ಬೆಂಗಳೂರಿನಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದ್ದಾರೆ. ಜಯಪ್ರಕಾಶ್ ಹೆಗ್ಡೆ ಬಿಜೆಪಿ ಸೇರ್ಪಡೆಗೆ ಬಿಎಸ್ವೈ ಹಸಿರು ನಿಶಾನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವೇಳೆ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಡಿಸಿಎಂ ಆರ್.ಅಶೋಕ್ ಉಪಸ್ಥಿತರಿದ್ದರು.
ಚರ್ಚೆ ಬಳಿಕ ಮಾತನಾಡಿದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕಾಂಗ್ರೆಸ್ ಪಕ್ಷ ನನ್ನನ್ನು ಹೊರಗೆ ಹಾಕಿದೆ. ಅಭಿಮಾನಿಗಳು ಬಿಜೆಪಿ ಸೇರ್ಪಡೆಯಾಗುವಂತೆ ಸಲಹೆ ನೀಡಿದ್ದಾರೆ. ಆದರೆ, ಅಧಿಕೃತವಾಗಿ ಯಾವಾಗ ಸೇರ್ಪಡೆಯಾಗಬೇಕು ಎಂದು ತೀರ್ಮಾನಿಸಿಲ್ಲ ಎಂದು ಹೇಳಿದರು.