ಪ್ರಧಾನಿ ಮೋದಿ ಭೇಟಿಯಾದ ಮಾಜಿ ಪ್ರಧಾನಿ ದೇವೇಗೌಡರು

ಗುರುವಾರ, 10 ಆಗಸ್ಟ್ 2017 (14:25 IST)
ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದು ನವದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದಾರೆ.
ಇಂದು ಬೆಳಿಗ್ಗೆ ಪ್ರಧಾನಿ ಮೋದಿಯನ್ನು ಭೇಟಿಯಾದ ದೇವೇಗೌಡರು, ಹಾಸನದ ಶ್ರವಣಬೆಳಗೊಳದಲ್ಲಿ ನಡೆಯಲಿರುವ ಮಹಾಮಸ್ತಕಾಭೀಷೇಕ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.
 
ಮಹಾಮಸ್ತಕಾಭಿಷೇಕವು 12 ವರ್ಷಗಳಿಗೊಮ್ಮೆ ನಡೆಯುತ್ತದೆ. ಈ ಹಬ್ಬದಲ್ಲಿ ಗೊಮ್ಮಟೇಶ್ವರ ಮೂರ್ತಿಗೆ ಅಭಿಷೇಕವನ್ನು ಮಾಡಲಾಗುತ್ತದೆ. ಕೇಸರಿ, ತುಪ್ಪ, ಹಾಲು, ಮೊಸರು, ಚಿನ್ನದ ನಾಣ್ಯ ಮತ್ತು ಹಲವು ವಸ್ತುಗಳಿಂದ ಈ ಏಕಶಿಲಾ ವಿಗ್ರಹಕ್ಕೆ ಅಭಿಷೇಕ ಮಾಡಿಸಲಾಗುತ್ತದೆ.
 
ಜೈನ ಧರ್ಮೀಯರ ಪವಿತ್ರ ಶ್ರವಣಬೆಳಗೊಳ ಮಹಾಮಸ್ತಾಭಿಷೇಕ ಕಾರ್ಯಕ್ರಮಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಮಾಜಿ  ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ