ಕೆಪಿಎಸ್ಸಿ ಹುದ್ದೆಯ ನೇಮಕಾತಿಗೆ ಪರೀಕ್ಷೆ: ಅವ್ಯವಹಾರವಾದಲ್ಲಿ ಕಠಿಣ ಕ್ರಮ

ಬುಧವಾರ, 19 ಸೆಪ್ಟಂಬರ್ 2018 (21:17 IST)
ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಯ ಗ್ರೂಪ್ ‘ಸಿ’ ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಸೆಪ್ಟೆಂಬರ್ 22 ಮತ್ತು 24 ರಂದು ಕಲಬುರಗಿ ನಗರದ ಎರಡು ಕೇಂದ್ರಗಳಲ್ಲಿ ಹಾಗೂ 23 ರಂದು 52 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸುವುದು. ಪರೀಕ್ಷಾ ಕರ್ತವ್ಯದಲ್ಲಿ ಯಾವುದೇ ಅವ್ಯವಹಾರ ಕಂಡುಬಂದಲ್ಲಿ ಸಂಬಂಧಿಸಿದ ಕೇಂದ್ರದ ಮುಖ್ಯಸ್ಥರನ್ನು ಹಾಗೂ ಸಂಸ್ಥೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪರೀಕ್ಷೆಗೆ ಸಂಬಂಧಿಸಿದಂತೆ ರೂಟ್ ಅಧಿಕಾರಿಗಳು ಮತ್ತು ವೀಕ್ಷಕರು ಹಾಗೂ ಪರೀಕ್ಷಾ ಕೇಂದ್ರದ ಉಪ ಮುಖ್ಯ ಅಧೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಂತ್ರಿಕೇತರ ಹುದ್ದೆಗಳಿಗೆ ಸೆಪ್ಟೆಂಬರ್ 22 ರಂದು ನಡೆಯುವ ಪದವಿಗಿಂತ ಕೆಳಮಟ್ಟದ ವಿದ್ಯಾರ್ಹತೆಯ ಪರೀಕ್ಷೆಗೆ 710 ಅಭ್ಯರ್ಥಿಗಳು, ಸೆಪ್ಟೆಂಬರ್ 23 ರಂದು ನಡೆಯುವ ಪದವಿ ಮಟ್ಟದ ವಿದ್ಯಾರ್ಹತೆಗೆ 18065 ಅಭ್ಯರ್ಥಿಗಳು ಸಾಮಾನ್ಯ ಜ್ಞಾನ ಮತ್ತು ಸಂವಹನ ಪತ್ರಿಕೆಯ ಪರೀಕ್ಷೆ ಬರೆಯಲಿದ್ದಾರೆ. ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ಸೆಪ್ಟೆಂಬರ್ 24 ರಂದು ಜರುಗುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ 656 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ