ಹೊರಟ್ಟಿ ಸೋಲು-ಗೆಲುವಿನ ಲೆಕ್ಕಾಚಾರ

ಗುರುವಾರ, 7 ಏಪ್ರಿಲ್ 2022 (19:35 IST)
ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ಜೂನ್‌ನಲ್ಲಿ ನಡೆಯಲಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಇದರಿಂದ ಹೊರಟ್ಟಿ ಅವರಿಗೆ ಹಾಗೂ ಬಿಜೆಪಿಗೆ ಲಾಭವೇನು ಎಂಬ ಲೆಕ್ಕಾಚಾರ ನಡೆಯುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ, ಪರಿಷತ್‌ನಲ್ಲಿ ಬಹುಮತಕ್ಕೆ ಇನ್ನೂ ಒಂದು ಮತ ಕಡಿಮೆ ಇದೆ. ಹೊರಟ್ಟಿ ಅವರ ಸೇರ್ಪಡೆಯಿಂದ ಆ ಕೊರತೆ ನೀಗಿಸಬಹುದು. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಹೊರಟ್ಟಿ ಅವರು ಸತತ ಏಳು ಬಾರಿ ಗೆಲುವು ಸಾಧಿಸಿದ್ದಾರೆ. ಅವರನ್ನು ಸೋಲಿಸಲು ಬಿಜೆಪಿ, ಕಾಂಗ್ರೆಸ್‌ ಪಕ್ಷಗಳಿಂದ ಸಾಧ್ಯವಾಗಿಲ್ಲ. ಈ ಬಾರಿಯೂ ಬಿಜೆಪಿಯಲ್ಲಿ ಆಕಾಂಕ್ಷಿಗಳು ಇದ್ದಾರೆ. ಆದರೆ, ಅವರು ಗೆಲ್ಲುವ ವಿಶ್ವಾಸ ಆ ಪಕ್ಷದ ನಾಯಕರಿಗೆ ಇಲ್ಲ. ಹೊರಟ್ಟಿಯಾದರೆ, ಗೆಲುವು ಸುಲಭವಾಗಬಹುದು ಎಂಬುದು ಬಿಜೆಪಿ ಮುಖಂಡರ ಲೆಕ್ಕಾಚಾರ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ