ರಾಜ್ಯದ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ಸಿಹಿಸುದ್ದಿ

ಮಂಗಳವಾರ, 28 ಡಿಸೆಂಬರ್ 2021 (19:54 IST)
ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಹೈಸ್ಕೂಲ್ ಮತ್ತು ಹೈಸ್ಕೂಲ್ ಹೋಗುವ ಸಂಖ್ಯೆ ಕಡಿಮೆಯಾಗುತ್ತಿರುವ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ 8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳನ್ನು ವಿಸ್ತರಿಸುವ ಬಗ್ಗೆ ತೀರ್ಮಾನ ಮಾಡಿದ್ದು, ಈ ಬಗ್ಗೆ ತಕ್ಷಣ ಆದೇಶ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ವಿಜಯಪುರ ಜಿಲ್ಲೆಯಲ್ಲಿ ಲೋಕೋಪಯೋಗಿ, ಕಂದಾಯ, ವಸತಿ, ಪ್ರವಾಸೋದ್ಯಮ, ಆರೋಗ್ಯ, ನಗರಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ 11 ಇಲಾಖೆಗಳ ಸುಮಾರು 244 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಹೆಣ್ಣು ಮಕ್ಕಳು ಹೈಸ್ಕೂಲ್ ಬರುವುದಕ್ಕೆ ಹಾಗೂ ಹೈಸ್ಕೂಲ್ ನಿಂದ ಪಿಯುಸಿ ಮಾಡುವ ಸಂಖ್ಯೆ ಕಡಿಮೆಯಾಗುತ್ತಿದೆಂಬ ಮಾಹಿತಿಯಿಂದ ಇದಕ್ಕೆ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ರೈತರ ವಿದ್ಯಾನಿಧಿಯನ್ನು 8ನೇ ಮತ್ತು 9ನೇ ತರಗತಿ ಮಕ್ಕಳಿಗೂ ವಿಸ್ತರಣೆ ಮಾಡುಬೇಕೆನ್ನುವ ಬಗ್ಗೆ ತೀರ್ಮಾನ ಮಾಡಿದ್ದೇನೆ ಈ ಬಗ್ಗೆ ಕೂಡಲೇ ಆದೇಶ ಮಾಡುವುದಾಗಿ ಘೋಷಿಸಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 4 ತಿಂಗಳಾಗಿದೆ, ಅಧಿಕಾರ ಪಡೆದ 2 ಗಂಟೆಯಲ್ಲಿಯೇ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿಯನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ, ಇತಿಹಾಸದಲ್ಲಿಯೇ ಈ ಯೋಜನೆ ಬೇರೆಯ ರಾಜ್ಯದಲ್ಲೂ ಇರಲಿಲ್ಲ, ಅಂತಹ ಒಂದು ನಿರ್ಣಯವನ್ನು ಕೈಗೊಳ್ಳಲಾಗಿದೆ. 2.4 ಲಕ್ಷ ವಿದ್ಯಾರ್ಥಿ ವೇತನ ವಿತರಿಸಲಾಗಿದೆ, ಪದವಿ ಶಿಕ್ಷಣಕ್ಕೆ ಈಗ ಪ್ರವೇಶ ಪ್ರಕ್ರಿಯೆ ನಡೆಯುತ್ತಿದೆ, ಅದು ಪೂರ್ಣಗೊಳ್ಳದಂತೆ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಲಾಗುವುದು ಎಂದು 5 ಲಕ್ಷ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ