ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ.
ಕೋಮು ಸೂಕ್ಷ್ಮ ಜಿಲ್ಲೆ ಇದೀಗ ಬೂದಿ ಮುಚ್ಚಿದ ಕೆಂಡದಂತಾಗಿದೆ. 3 ದಿನಗಳ ಕಾಲ ಕಠಿಣ ಪರಿಸ್ಥಿತಿ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಈ ಬೆನ್ನಲ್ಲೇ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು. ವಿವಿಧ ಜಿಲ್ಲೆಗಳಿಂದ 2 ಸಾವಿರಕ್ಕೂ ಅಧಿಕ ಪೊಲೀಸರನ್ನು ಕರೆಸಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಿ ದುಷ್ಕೃತ್ಯ ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷ ಹರಡುವವರ ಮೇಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆಗಸ್ಟ್ 1ರ ವರೆಗೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಎಲ್ಲಾ ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ.