ಒಡಿಶಾದಲ್ಲಿ ಎಕ್ಸ್‌ಪ್ರೆಸ್‌ ರೈಲಿಗೆ ಬೆಂಕಿ

ಶುಕ್ರವಾರ, 9 ಜೂನ್ 2023 (20:00 IST)
ಒಡಿಶಾದಲ್ಲಿ ಕಳೆದ ವಾರ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 288 ಜನ ಬಲಿಯಾಗಿದ್ದಾರೆ. ಈ ಘಟನೆಯನ್ನು ಇನ್ನೂ ದೇಶ ಮರೆತಿಲ್ಲ. ಆದರೆ, ಈ ನಡುವೆ ಒಡಿಶಾದಲ್ಲೇ ಮತ್ತೊಂದು ಅವಘಡ ನಡೆದಿದೆ. ಒಡಿಶಾದ ನುವಾಪಾದ ಜಿಲ್ಲೆಯಲ್ಲಿ ಗುರುವಾರ ದುರ್ಗ್-ಪುರಿ ಎಕ್ಸ್‌ಪ್ರೆಸ್‌ನ ಹವಾನಿಯಂತ್ರಿತ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಭಯಭೀತರಾಗಿದ್ದಾರೆ. ಆದರೆ, ಅದೃಷ್ಟವಶಾತ್‌ ಈ ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಖರಿಯಾರ್ ರೋಡ್ ನಿಲ್ದಾಣವನ್ನು ತಲುಪುತ್ತಿದ್ದಂತೆ ರೈಲಿನ ಬಿ3 ಕೋಚ್‌ನಲ್ಲಿ ಹೊಗೆ ಪತ್ತೆಯಾಗಿದೆ. ಘರ್ಷಣೆ ಮತ್ತು ಬ್ರೇಕ್‌ಗಳ ಅಪೂರ್ಣ ರಿಲೀಸ್‌ನಿಂದಾಗಿ ಬ್ರೇಕ್ ಪ್ಯಾಡ್‌ಗಳಿಗೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯು ಬ್ರೇಕ್ ಪ್ಯಾಡ್‌ಗಳಿಗೆ ಮಾತ್ರ ಸೀಮಿತವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ