ಎಕ್ಸ್ಪ್ರೆಸ್ವೇ ಟೋಲ್ ಶುಲ್ಕ ಹೆಚ್ಚಳ ನಿರ್ಧಾರ ಕೈಬಿಟ್ಟ ಹೆದ್ದಾರಿ ಪ್ರಾಧಿಕಾರ

ಶನಿವಾರ, 1 ಏಪ್ರಿಲ್ 2023 (13:36 IST)
ರಾಮನಗರ : ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಟೋಲ್ ದರ ಹೆಚ್ಚಳಕ್ಕೆ ತೀವ್ರ ವಿರೋಧ ಎದುರಾದ ಬಳಿಕ ಹೆದ್ದಾರಿ ಪ್ರಾಧಿಕಾರ ತನ್ನ ಆದೇಶವನ್ನು ವಾಪಸ್ ಪಡೆದಿದೆ.
 
ಟೋಲ್ ಪ್ರಾರಂಭವಾದ 17 ದಿನಗಳಲ್ಲಿ ದರ ಹೆಚ್ಚಳಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ದರ ಏರಿಕೆಯನ್ನು ಅಧಿಕಾರಿಗಳು ಮುಂದೂಡಿ ಮರು ಆದೇಶ ಹೊರಡಿಸಿದ್ದಾರೆ.

ದಶಪಥ ಹೆದ್ದಾರಿಯ ಟೋಲ್ ಸಂಗ್ರಹ ಆರಂಭವಾಗಿ ಕೇವಲ 17ದಿನಗಳು ಕಳೆದಿವೆ. ಈ ನಡುವೆಯೇ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಅನ್ವಯ ಎಕ್ಸ್ಪ್ರೆಸ್ವೇ ಟೋಲ್ ದರವನ್ನೂ ಹೆದ್ದಾರಿ ಪ್ರಾಧಿಕಾರ ಹೆಚ್ಚಳಕ್ಕೆ ಆದೇಶ ಹೊರಡಿಸಿತ್ತು.

ಶನಿವಾರ ಮುಂಜಾನೆಯಿಂದ ಹೆಚ್ಚುವರಿ ಶುಲ್ಕ ವಸೂಲಿ ಆರಂಭಿಸಿದ್ದ ಟೋಲ್ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ ಸಹ ಹೊರ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಹಿಂದಿನ ದರ ಮುಂದುವರೆಸುವಂತೆ ಮರು ಆದೇಶ ಹೊರಡಿಸಲಾಗಿದೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ