ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ದಿನಾಂಕ ವಿಸ್ತರಣೆ
ಏಪ್ರಿಲ್ ಮೇ 2022ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಮತ್ತು ಮರು ಏಣಿಕೆ ಪ್ರಕ್ರಿಯೆಯ ಫಲಿತಾಂಶವನ್ನು ಜುಲೈ 31ರಂದು ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಪ್ರಕಟಿಸಿದ ಫಲಿತಾಂಶದಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮಾತ್ರ ಆಗಸ್ಟ್ 2022ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಈ ಹಿಂದಿನ ದಂಡ ಶುಲ್ಕದೊಂದಿದೆ ನಿಗದಿತ ಪರೀಕ್ಷಾ ಶುಲ್ಕವನ್ನು ಪಾವತಿಸಲು ದಿನಾಂಕ 02.08.2022 ರಿಂದ 04.08.2022ರವರೆಗೆ ದಿನಾಂಕವನ್ನು ವಿಸ್ತರಿಸಿ ಆದೇಶವನ್ನು ಮಾಡಲಾಗಿದೆ.