ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಶುಲ್ಕ ಕಟ್ಟುವುದಕ್ಕೆ ದಿನಾಂಕ ವಿಸ್ತಾರಣೆ

ಸೋಮವಾರ, 1 ಆಗಸ್ಟ್ 2022 (20:51 IST)
ದ್ವಿತೀಯ ಪಿಯು
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿ, ಮರುಮೌಲ್ಯಮಾಪನ ಮತ್ತು ಮರುಎಣಿಕೆ ಪ್ರಕ್ರಿಯೆಯಲ್ಲಿಯೂ ಅನುತ್ತೀರ್ಣರಾಗಿರುವಂತ ವಿದ್ಯಾರ್ಥಿಗಳು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಶುಲ್ಕ ಕಟ್ಟೋದಕ್ಕೆ, ದಿನಾಂಕವನ್ನು ವಿಸ್ತರಿಸಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ದಿನಾಂಕ 31-07-2022ರಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನ ಮ್ತತು ಮರುಎಣಿಕೆಯ ಫಲಿತಾಂಶವನ್ನು ಪ್ರಕಟಿಸಲಾಗಿತ್ತು ಎಂದಿದ್ದಾರೆ. ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮಾತ್ರ ಆಗಸ್ಟ್ 2022ರಲ್ಲಿ ನಡೆಯಲಿರುವಂತ ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಈ ಹಿಂದಿನ ದಂಡ ಶುಲ್ಕದೊಂದಿಗೆ ನಿಗಧಿತ ಪರೀಕ್ಷಾ ಶುಲ್ಕವನ್ನು ಪಾವತಿಸಲು ದಿನಾಂಕ 02-08-2022 ರಿಂದ 04-08-2022ರವರೆಗೆ ವಿಸ್ತರಿಸಿರೋದಾಗಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ