ಕ್ರಿಸ್‌ಮಸ್‌ ಗೆ KSRTC ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

ಬುಧವಾರ, 20 ಡಿಸೆಂಬರ್ 2023 (14:23 IST)
ಕ್ರಿಸ್‌ಮಸ್‌ ರಜೆಗೆ ಕೆಎಸ್‌ಆರ್‌ಟಿಸಿಯಿಂದ ಒಂದು ಸಾವಿರ ಹೆಚ್ಚುವರಿ ಬಸ್‌ ಸೇವೆ ಕಲ್ಪಿಸಲಾಗಿದೆ.ಡಿ.22ರಿಂದ 24ರ ವರೆಗೆ ನಗರದ ವಿವಿಧ ಬಸ್‌ ನಿಲ್ದಾಣಗಳಿಂದ ಹೆಚ್ಚುವರಿ ಬಸ್‌ ಕಾರ್ಯಾಚರಣೆ ನಡೆಯಲಿದೆ.

ಡಿ.25ರಂದು ಮತ್ತಷ್ಟು ವಿಶೇಷ ಬಸ್‌ಗಳು ಸಂಚಾರ ನಡೆಸಲಿದೆ.ನಾಲ್ಕು ಅಥವಾ ಹೆಚ್ಚು ಜನರ ಪ್ರಯಾಣದ ಟಿಕೆಟ್‌ ಬುಕ್ಕಿಂಗ್‌ ಮೇಲೆ ಶೇ 5ರಷ್ಟು ರಿಯಾಯಿತಿ ನೀಡಲಾಗಿದೆ.ಒಮ್ಮೆಲೇ ಬುಕ್‌ ಮಾಡಿದರೆ ಟಿಕೆಟ್‌ ಮೇಲೆ ಶೇ 10ರಷ್ಟು ರಿಯಾಯಿತಿ ಸಿಗಲಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.
 
ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ, ವಿಜಯವಾಡ, ಹೈದರಾಬಾದ್‌ಗೆ ಬಸ್‌ ತೆರಳಲಿವೆ.

ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ಹೆಚ್ಚುವರಿ ಬಸ್‌ ಹೊರಡಲಿವೆ.ಶಾಂತಿನಗರದ ಬಸ್‌ ನಿಲ್ದಾಣದಿಂದ ಮಧುರೈ, ಕುಂಭಕೋಣಂ, ತಿರುಚ್ಚಿ, ಚೆನ್ನೈ, ಕೊಯಮತ್ತೂರ್‌, ವಿಜಯವಾಡ, ಹೈದರಾಬಾದ್ ಸೇರಿದಂತೆ ತಮಿಳುನಾಡು ಹಾಗೂ ಆಂಧ್ರಪ್ರದೇಶ, ತೆಲಂಗಾಣಕ್ಕೆ ಬಸ್‌ಗಳು ತೆರಳಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ