ಜಾತಿಗಣತಿಯಿಂದ ಮೀಸಲಾತಿ ಹೆಚ್ಚಳಕ್ಕೆ ಅನುಕೂಲ-ಗೃಹ ಸಚಿವ
ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಹಣ ಪೋಲು ಮಾಡಲು ಮಾಡಿಲ್ಲ. ಈ ಸಂಬಂಧ ಬೇಗ ವರದಿ ಕೊಡುವಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರಿಗೆ ಸರ್ಕಾರ ಸೂಚಿಸಿದೆ. ರಾಜ್ಯದಲ್ಲೂ ಮೀಸಲಾತಿ ಹೆಚ್ಚಳ ಕೂಗು ಕೇಳಿ ಬರುತ್ತಿದ್ದು, ವರದಿ ಬಹಿರಂಗಪಡಿಸಿದರೆ ಅನುಕೂಲಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ಶೇ.69 ರಷ್ಟು ಮೀಸಲಾತಿ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲೂ ಮೀಸಲಾತಿ ಹೆಚ್ಚಳ ಕೂಗು ಕೇಳಿ ಬರುತ್ತಿದ್ದು, ಶೇ.50ಕ್ಕಿಂತ ಹೆಚ್ಚು ಮೀಸಲಾತಿ ನೀಡಲು ಆಗ್ರಹಿಸುತ್ತಿದ್ದಾರೆ. ಹೀಗಾಗಿ ಜಾತಿ ಜನಗಣತಿ ವರದಿ ಬಹಿರಂಗಪಡಿಸಿದರೆ ಅನುಕೂಲವಾಗುತ್ತದೆ ಎಂದು ಪರಮೇಶ್ವರ್ ಹೇಳಿದ್ದಾರೆ.