ನಂ 1 ಕೈಗಾರಿಕಾ ಸ್ನೇಹೀ ರಾಜ್ಯವಾಗುವತ್ತ ಕರ್ನಾಟಕ ದಾಪುಗಾಲು: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

ಶುಕ್ರವಾರ, 2 ಜುಲೈ 2021 (17:21 IST)
ಬೆಂಗಳೂರು: ಕರೋನಾ ಸಂಕಷ್ಟ ಕಾಲದಲ್ಲೂ ಕರ್ನಾಟಕ ರಾಜ್ಯ ಅತಿ ಹೆಚ್ಚು ಬಂಡವಾಳ ಹೂಡಿಕೆಯ ಪ್ರಸ್ತಾಪಗಳನ್ನು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ರಾಜ್ಯ ಸರಕಾರ ಹೊರತಂದಿರುವ ಕ್ರಾಂತಿಕಾರಿ ಕಾನೂನುಗಳು ಹಾಗೂ ನೀತಿಗಳಿಂದ ಕರ್ನಾಟಕ ರಾಜ್ಯ ದೇಶದಲ್ಲಿ ನಂ 1 ಕೈಗಾರಿಕಾ ಸ್ನೇಹಿ ರಾಜ್ಯವಾಗುವತ್ತ ದಾಪುಗಾಲು ಇಡುತ್ತಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ಹೇಳಿದರು. 
 
ಶುಕ್ರವಾರ ಬೆಂಗಳೂರು ನಗರದಲ್ಲಿ ಲಘು ಉದ್ಯೋಗ ಭಾರತಿ ಕರ್ನಾಟಕ, ಬೆಂಗಳೂರು ಉತ್ತರ ಪೀಣ್ಯ ಘಟಕದ ಉದ್ಘಾಟನೆಯನ್ನು ಮಾಡಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯವನ್ನು ಇನ್ನೂ ಹೆಚ್ಚು ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೈಗೊಂಡಿರುವ ಕ್ರಾಂತಿಕಾರಿ ಕಾನೂನು ಹಾಗೂ ನೀತಿಗಳು ಫಲ ನೀಡುತ್ತಿವೆ…

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ