ನಕಲಿ ಸೇನಾಧಿಕಾರಿ ಅರೆಸ್ಟ್

ಶುಕ್ರವಾರ, 4 ನವೆಂಬರ್ 2022 (18:34 IST)
ಆರ್ಮಿಯ ಉನ್ನತಾಧಿಕಾರಿ ಎಂದು  ಹೇಳಿಕೊಂಡು ಅಡ್ಡಾಡುತ್ತಿದ್ದ ನಕಲಿ ವ್ಯಕ್ತಿಯನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಕಾರವಾರ ಸಿದ್ಧರ ನಿವಾಸಿ ವಿನಾಯಕ ಮಹಾಲೆ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈ ಆರೋಪಿ ಲೆಫ್ಟಿನೆಂಟ್ ಕರ್ನಲ್ ರ್ಯಾಂಕಿಂಗ್ ಯೂನಿಫಾರ್ಮ್ ಧರಿಸಿಕೊಂಡು ಅಡ್ಡಾಡುತ್ತಿದ್ದ. ಆರ್ಮಿಯಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಹಲವರಿಂದ ಹಣ ಪಡೆದು ಮೋಸ ಮಾಡಿದ್ದಾನೆ. ಈ ವ್ಯಕ್ತಿ 4 ಲಕ್ಷ , 66 ಸಾವಿರ, 35, ಸಾವಿರ ಹೀಗೆ ಒಬ್ಬೊಬ್ಬರಿಂದ ಹಣ ವಶಪಡಿಸಿಕೊಳ್ಳಲಾಗಿದೆ. ಉದ್ಯೋಗ ನೀಡುವುದಾಗಿ ಹಲವರಿಗೆ ಪಂಗನಾಮ ಹಾಕಿದ್ದಾನೆ. ಈ ಹಿಂದೆ ಆರೋಪಿ ಬೆಳಗಾವಿ ಕಮಾಂಡೋ ಟ್ರೈನಿಂಗ್ ಸ್ಕೂಲ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ ಈತ ಮರಾಠಾ ಲೈಟ್ ಇನ್‌ಫೆಂಟ್ರಿ ವಿಭಾಗದಡಿ ಹೆಲ್ಪಿಂಗ್ ಬಾಯ್ ಆಗಿ ಸ್ವೀಪಿಂಗ್ ಮುಂತಾದ ಕೆಲಸ ಮಾಡುತ್ತಿದ್ದ. ಮಾರುತಿ ನಗರದ ಹೇಮಲತಾ ಎಂಬುವರಿಂದ ಹಣ ಪಡೆದು ಮೋಸ ಮಾಡಿದ್ದಾನೆ. ಹೇಮಲತಾ ಆತನ ವಿರುದ್ದ ದೂರು ನೀಡಿದ ಹಿನ್ನೆಲೆ ಕಳೆದ ಒಂದೆರಡು ವಾರಗಳಿಂದ ಈತನ ಮೇಲೆ ನಿಗಾ ಇರಿಸಿದ್ದ ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರು ಜಂಟಿ ಕಾರ್ಯಾಚರಣೆ ಮಾಡಿ ಆರೋಪಿಯ ಬಂಧನ ಮಾಡಿದ್ದಾರೆ. ಈ ಸಂಬಂಧ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಾರವಾರ, ಗೋವಾ ಸೇರಿ ಹಲವರಿಗೆ ಮೋಸ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ