ರಾಜಭವನಕ್ಕೆ ಹುಸಿ ಬಾಂಬ್ ಬೆದರಿಕೆ

ಮಂಗಳವಾರ, 12 ಡಿಸೆಂಬರ್ 2023 (14:22 IST)
ರಾಜಭವನಕ್ಕೆ ಬಾಂಬ್ ​ ಬೆದರಿಕೆ ಕರೆ ಬಂದಿದೆ. ನಿನ್ನೆ ರಾತ್ರಿ 11.30ಕ್ಕೆ ಬೆದರಿಕೆ ಕರೆ ಬಂದಿದ್ದು, ಪೊಲೀಸರು ತಕ್ಷಣ ರಾಜಭವನದಲ್ಲಿ ಪರಿಶೀಲನೆ ನಡೆಸಿದ್ದು, ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಗೊತ್ತಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಧಾನಸೌಧ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.

ಇತ್ತೀಚಿಗೆ ಬೆಂಗಳೂರಿನಲ್ಲಿ ಬಾಂಬ್​ ಬೆದರಿಕೆ ಕರೆಗಳು ಹೆಚ್ಚಾಗುತ್ತಿವೆ. ಸರಿಯಾಗಿ 12 ದಿವಸದ ಹಿಂದೆ ಡಿಸೆಂಬರ್​​ 1 ರಂದು ಬೆಂಗಳೂರಿನ 60ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಕರೆ ಬಂದಿತ್ತು. ಇದು ಶಾಲಾ ಆಡಳಿತ ಮಂಡಳಿಗೆ ಶಾಕ್​ ನೀಡಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಬಾಂಬ್​ ನಿಷ್ಕ್ರಿಯ ದಳ ತಂಡ ಎಲ್ಲ ಶಾಲೆಗಳನ್ನು ಪರಿಶೀಲಿಸಿದ್ದರು.

ಆಗ ಇದೊಂದು ಹುಸಿ ಬಾಂಬ್​ ಬೆದರಿಕೆ ಕರೆ ಎಂದು ತಿಳಿಯಿತು. ಇನ್ನು ವಿಷಯ ಗೊತ್ತಾಗುತ್ತಿದ್ದಂತೆ ಶಾಲೆಗಳಿಗೆ ತೆರಳಿದ ಪೋಷಕರು ಮಕ್ಕಳನ್ನು ಮನೆಗಳಿಗೆ ಕರೆದುಕೊಂಡು ಬಂದಿದ್ದರು. ಅಂದು ಒಂದು ದಿನ ಶಾಲೆಗಳಿಗೆ ರಜೆ ನೀಡಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ