ಸಿಎಂ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ: ಸೈಬರ್ ಕ್ರೈಂ ಪೊಲೀಸರಿಗೆ ದೂರು

ಗುರುವಾರ, 29 ಡಿಸೆಂಬರ್ 2016 (18:09 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ತೆರೆದು ಗೊಂದಲಕಾರಿ ಟ್ವೀಟ್ ಮಾಡುತ್ತಿರುವ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿದೆ. 
ಸಿಎಂ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ತೆರೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್‌ಮಟ್ಟು ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. 
 
ಸಿಎಂ ಆಫ್ ಕರ್ನಾಟಕ ಎಂಬ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ತೆರೆದು ಗೊಂದಲಕಾರಿ ಟ್ವೀಟ್ ಮಾಡುತ್ತಿರುವ ಕುರಿತು ದೂರು ದಾಖಲಾಗಿದೆ. 
 
ಈ ಹಿಂದೆಯೂ ಸಹ ಸಿಎಂ ಆಫ್ ಕರ್ನಾಟಕ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ತೆರೆದು ಟ್ವೀಟ್ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ