ಸುದ್ದಿಗೋಷ್ಠಿಯಲ್ಲೇ ಹೃದಯಾಘಾತಗೊಂಡು ಸಿದ್ಧರಾಮಯ್ಯ ಅಭಿಮಾನಿ ಸಾವು: ಪ್ರತಿಭಟನೆ ವೇಳೆ ಎಚ್ಚರಿಕೆಯಿಂದಿರಲು ಸಿಎಂ ಮನವಿ

Sampriya

ಸೋಮವಾರ, 19 ಆಗಸ್ಟ್ 2024 (16:55 IST)
Photo Courtesy X
ಬೆಂಗಳೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ವಿಚಾರವಾಗಿ ರಾಜ್ಯಪಾಲರ ನಡೆ ವಿರೋಧಿಸಿ ಸಿದ್ದರಾಮಯ್ಯ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿ, ರಾಜ್ಯಪಾಲರ ವಿರುದ್ಧ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದಕೋಲಾರ ಕಾಂಗ್ರೆಸ್ ನಾಯಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ರವಿಚಂದ್ರನ್  ಅಲ್ಲೇ ಕುಸಿದು ಬಿದ್ದಿದ್ದಾರೆ.

ಕೂಡಲೇ ಅವರನ್ನು ಹತ್ತಿರದ ಕನ್ನಿಂಗ್‌ ಹ್ಯಾಮ್‌ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ಕರೆದುಕೊಂಡು ಹೋಗದಿದ್ದಾರೆ. ಆದರೆ ಪರೀಕ್ಷೆ ಮಾಡಿದ ವೈದ್ಯರು ಅವರು ಸಾವನ್ನಪ್ಪಿರುವುದಾಗಿ ಘೋಷಣೆ ಮಾಡಿದ್ದಾರೆ.

ಮೃತ ಪಿಕೆ ರವಿಚಂದ್ರನ್ ಅವರು ಚನ್ನಸಂದ್ರ ನಿವಾಸಿಯಾಗಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಂಘದ ಮುಖಂಡರಾಗಿದ್ದರು.

ಇನ್ನೂ ಪ್ರತಿಭಟನೆ ವೇಳೆ ಬಾಗಲಕೋಟೆಯಲ್ಲಿ ಕಾರ್ಯಕರ್ತರೊಬ್ಬರಿಗೆ ಗಾಯವಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡು ಅಭಿಮಾನಿಗಳು ದಯವಿಟ್ಟು ಎಚ್ಚರಿಕೆಯಿಂದಿರಿ ಎಂದು ಮನವಿ ಮಾಡಿದ್ದಾರೆ. ಆದರಾಜ್ಯಪಾಲರ ಕಾನೂನು ಬಾಹಿರ ನಿರ್ಣಯ ಖಂಡಿಸಿ ಬಾಗಲಕೋಟೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ದ್ಯಾಮಪ್ಪ ಎಂಬ ನನ್ನ ಅಭಿಮಾನಿಯೊಬ್ಬರು ಗಾಯಗೊಂಡ ವಿಚಾರ ಈಗಷ್ಟೆ ತಿಳಿಯಿತು.

ದೇಶದ ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗಾಗಿ ನನ್ನ ಮತ್ತು ನಮ್ಮ ಪಕ್ಷದ ಪರವಾಗಿ ಇಂದು ಹೋರಾಟ ನಡೆಸುತ್ತಿರುವ ನನ್ನೆಲ್ಲ ಆತ್ಮೀಯ ಬಂಧುಗಳು ಪ್ರತಿಭಟನೆಯ ವೇಳೆ ದಯವಿಟ್ಟು ಎಚ್ಚರಿಕೆಯಿಂದಿರಿ. ನಿಮ್ಮ ಕಾಳಜಿ, ಆಕ್ರೋಶವನ್ನು ನಾನು ಅರ್ಥೈಸಿಕೊಳ್ಳಬಲ್ಲೆ ಆದರೆ ನನಗೆ ನಿಮ್ಮೆಲ್ಲರ ಆರೋಗ್ಯ, ಜೀವವೂ ಮುಖ್ಯ. ನಿಮ್ಮ ಪ್ರೀತಿಗೆ ನಾನು ಸದಾ ಋಣಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ