ಮೋದಿ ಸಂಪುಟದಲ್ಲಿ ಸಾಮಾಜಿಕ ನ್ಯಾಯ: ದೇವೇಗೌಡ ಮೆಚ್ಚುಗೆ

ಗುರುವಾರ, 12 ಆಗಸ್ಟ್ 2021 (18:56 IST)
ಮೊದಲ ಬಾರಿಗೆ 12 ಮಹಿಳೆಯರಿಗೆ,8 ಎಸ್ಸಿ,12 ಎಸ್ಟಿ ಸಮುದಾಯದ ನಾಯಕರಿಗೆ ಮಂತ್ರಿ ಸ್ಥಾನ ನೀಡಿದ್ದಾರೆ. ಮೋದಿ ಅವರು ತಮ್ಮ ಸಂಪುಟದಲ್ಲಿ ಅವಕಾಶ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಸಾಮಾಜಿಕ ನ್ಯಾಯವೋ,ಚುನಾವಣೆ ತಂತ್ರವೋ ಗೊತ್ತಿಲ್ಲ ಆದರೆ ಅದು ಏನೇ ಇದ್ದಾರು ಮೋದಿಯವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ , ನಾನು ಪ್ರಧಾನಿಯಾಗಿದ್ದಾಗಲು ಇಂತಹದ್ದೇ ಅವಕಾಶ ಸೃಷ್ಟಿಸಿದ್ದೆ. ಈ ಬಾರಿ ಅಧಿವೇಶದಲ್ಲಿ ನಾನು ಒಂದು ದಿನವೂ ಗೈರು ಆಗಿಲ್ಲ ಎಲ್ಲಾ ದಿನದ ಕಲಾಪಗಳಲ್ಲಿ ಭಾಗಿಯಾಗಿದ್ದೇನೆ. ಶನಿವಾರ ರಜೆ ದಿನದಲ್ಲಿ ನಾನು ವಾರಣಾಸಿಗೆ ಹೋಗಿ ಬಂದೆ  ಕಲಾಪದಲ್ಲಿ ಯಾವುದೇ ವಿಷಯಗಳು ಚರ್ಚೆಯಾಗಿಲ್ಲ. ಚರ್ಚೆ ಮಾಡಲು ನಮ್ಮ ವಿರೋಧ ಪಕ್ಷಗಳು ಹಾಗು ಆಡಳಿತ ಪಕ್ಷಗಳು ಅವಕಾಶ ಮಾಡಿಕೊಟ್ಟಿಲ್ಲ ಎಂದರು.
ಎಲ್ಲಾ ಪಕ್ಷಗಳ ನಾಯಕರು ಒಟ್ಟಿಗೆ ಸೇರಿ ಚರ್ಚೆ ನಡೆಸಬೇಕು. ಮುಂದಿನ ಅಧಿವೇಶನ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ರಾಜ್ಯಸಭೆಯಲ್ಲಿ ಮಾತನಾಡುವ ಅವಕಾಶ ಸಿಕ್ಕಿಲ್ಲ ಮುಂದಿನ ದಿನಗಳಲ್ಲಿ ಸಮಯ ಸಿಗಬಹದು ಎಂದುಕೊಂಡಿದ್ದೇನೆ ಅವಕಾಶ ಸಿಕ್ಕರೆ  ರೈತರ ಸಮಸ್ಯೆಗಳ ಬಗ್ಗೆ ಮಾತನಾಡುತ್ತೇನೆ ಎಂದರು.
ಸಿಎಂ ಬೊಮ್ಮಾಯಿ ಅವರು ಭೇಟಿಯಾದ ನಂತರ ಪ್ರೀತಮ್ ಗೌಡ ಅಸಮಧಾನ ವಿಚಾರವಾಗಿ ಕೇಳಿದ ಪ್ರಶ್ನೆಗೆ  ಅಷ್ಟು ಕೆಳಮಟ್ಟಕ್ಕೆ ನನನ್ನು ಇಳಿಸಬೇಡಿ ನೀವು ಕೂಡ ಈ ಬಗ್ಗೆ ನನ್ನ ಮತ್ತೆ ಮತ್ತೆ ಪ್ರಶ್ನೆ ಮಾಡಬೇಡಿ ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅವರು ಹೇಳಿದರು.
ಬಿಜೆಪಿ ಪಕ್ಷದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಲ್ಲ ಯಡಿಯೂರಪ್ಪ ಮಾರ್ಗದರ್ಶನದಿಂದ ಬೊಮ್ಮಾಯಿ ನಿರ್ಧಾರ ಮಾಡುತ್ತಾರೆ ಗೊಂದಲಗಳನ್ನು ನಿಭಾಯಿಸಲು ಬೊಮ್ಮಾಯಿ ಸಮರ್ಥರಿದ್ದಾರೆ ಎಂದು ಕೊಂಡಿದ್ದೇನೆ ಸಿನೀಯರ್ ಬೊಮ್ಮಾಯಿ ನಾನು ಉತ್ತಮ  ಗೆಳೆಯರು. ಸಿಎಂ ಬೊಮ್ಮಾಯಿ ಅವರು ನನ್ನ ಮನೆಗೆ ಬಂದಿದ್ದರು. ನನ್ನಿಂದ ಸರಕಾರಕ್ಕೆ ಏನೂ ತೊಂದರೆ ಆಗಲ್ಲ ಎಂದಿದ್ದೇನೆ ಅಷ್ಟೇ. ನೆಲ ಜಲ ಭಾಷೆ ವಿಚಾರವಾಗಿ ಸಹಕಾರ ನೀಡುತ್ತೇವೆ. ಜೊತೆಗೆ ರಾಜ್ಯದ ಜನತೆ ಅಭಿವೃದ್ಧಿ ವಿಚಾರವಾಗಿ ನಮ್ಮ ಪಕ್ಷ ಎಲ್ಲದಕ್ಕೂ ಸಿದ್ದ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ