ಕೊಳವೆ ಬಾವಿಗೆ ಬಿದ್ದ ರೈತ : ಕೊನೆಗೂ ಶವ ಹೊರ ಬಂತು
ಕೊಳವೆಬಾವಿಗೆ ಬಿದ್ದಿದ್ದ ರೈತನ ಮೃತದೇಹವನ್ನು ಕೊನೆಗೂ ಹೊರತೆಗೆಯಲಾಗಿದೆ.
ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಸ್ವತಃ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.
ಘಟನೆಯ ಬಗ್ಗೆ ತನಿಖೆ ನಡೆದಿದ್ದು, ಆಕಸ್ಮಿಕವೋ ಅಥವಾ ಆತ್ಮಹತ್ಯೆಯೇ ಎಂಬುದು ತನಿಖೆಯ ಬಳಿಕ ಸ್ಪಷ್ಟವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಎನ್.ಡಿ.ಆರ್.ಎಫ್. ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು.