ರೈತರೇ ಅರ್ಜಿ ಹಾಕಿ ಬೆಳೆ ನಷ್ಟಕ್ಕೆ ಪರಿಹಾರ ಪಡೆದುಕೊಳ್ಳಿ

ಬುಧವಾರ, 3 ಜೂನ್ 2020 (16:41 IST)
ಕೋವಿಡ್ -19 ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ವಿಧಿಸಲಾಗಿದ್ದ ಲಾಕ್‍ಡೌನ್ ನಿಂದಾಗಿ ಬೆಳೆ ನಷ್ಟವಾಗಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಹಣ್ಣು ಮತ್ತು ತರಕಾರಿ ಬೆಳೆಗಳು ಮಾರಾಟವಾಗದೆ ನಷ್ಟ ಅನುಭವಿಸಿರುವ ಬೆಳೆಗಾರರಿಗೆ ಒಂದು ಹೆಕ್ಟೇರ್‍ಗೆ ಗರಿಷ್ಠ 15,000 ರೂ. ಮೀರದಂತೆ ಹಾಗೂ ಕನಿಷ್ಟ 2,000 ರೂ ಪರಿಹಾರ ನೀಡುವ ಯೋಜನೆ ಜಾರಿಗೊಳಿಸಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.  

ಬಾಳೆ, ಪಪ್ಪಾಯ, ಅಂಜೂರ, ಹಾಗೂ ತರಕಾರಿ ಬೆಳೆಗಳಾದ ಟೊಮೇಟೊ, ಹಸಿರು ಮೆಣಸಿನಕಾಯಿ, ಹೂಕೋಸು, ಎಲೆಕೋಸು, ಸಿಹಿಕುಂಬಳ, ಬೂದಕುಂಬಳ, ಕ್ಯಾರೇಟ್, ಈರುಳ್ಳಿ, ದಪ್ಪ ಮೆಣಸಿನಕಾಯಿ ಬೆಳೆಗಾರರಿಗೆ ಮಾತ್ರ ಆದ ನಷ್ಟಕ್ಕೆ ಪರಿಹಾರಧನ ಘೋಷಿಸಲಾಗಿದೆ.  

ರೈತರು ಅಗತ್ಯ ದಾಖಲಾತಿಗಳಾದ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.   ಜೂ.15 ರೊಳಗೆ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ