ರಾಜ್ಯದ ರೈತರೇನು ಭಯೋತ್ಪಾದಕರೆ: ಎ.ಎಸ್.ನಡಹಳ್ಳಿ

ಸೋಮವಾರ, 21 ನವೆಂಬರ್ 2016 (16:47 IST)
ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರೈತರನ್ನು ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಶಾಸಕ ಎ.ಎಸ್.ನಡಹಳ್ಳಿ, ರಾಜ್ಯದ ರೈತರೇನು ಭಯೋತ್ಪಾದಕರೆ ಎಂದು ಸರಕಾರವನ್ನು ನೇರವಾಗಿ ಪ್ರಶ್ನಿಸಿದ್ದಾರೆ.
ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಆಗಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೆಲಿಪ್ಯಾಡ್ ವ್ಯವಸ್ಥೆ ಮಾಡಲಾಗಿದೆ. ಆದರೆ, ಪ್ರತಿಭಟನಾ ನಿರತ ರೈತರಿಗೆ ರೈಸ್ತೆಯಲ್ಲಿ ಪ್ರತಿಭಟನೆ ಸಹ ಮಾಡಲು ಬಿಡುತ್ತಿಲ್ಲ. ಇದು ಯಾವ ನ್ಯಾಯ ಸ್ವಾಮಿ ಎಂದು ಬೇಸರ ವ್ಯಕ್ತಪಡಿಸಿದರು.  
 
ಬರ ಪರಿಹಾರ ನಿರ್ವಹಣೆಯಲ್ಲಿ ವಿಫಲ, ಮಹದಾಯಿ ಸಮಸ್ಯೆ ಪರಿಹಾರ ಹಾಗೂ ಉತ್ತರ ಕರ್ನಾಟಕ ರೈತರ ಸಮಸ್ಯೆಗಳ ಇತ್ಯರ್ಥ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲು ಆಗಮಿಸುತ್ತಿದ್ದ 300 ಕ್ಕೂ ಹೆಚ್ಚು ರೈತರನ್ನು ಪೊಲೀಸರು ಬಂಧಿಸಿದ್ದರು.
 
ರೈತರ ಬಂಧನ ವಿಷಯದ ಕುರಿತು ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ರಾಜ್ಯ ಸರಕಾರಕ್ಕೆ ರೈತರ ಬಗ್ಗೆ ಕಾಳಜಿಯೇ ಇಲ್ಲವೆಂದು ಬಿಜೆಪಿ ನಾಯಕರು ಆಡಳಿತ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ