ಹೌದು, 2021-22 ನೇ ಸಾಲಿಗೆ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಅಧಿಕೃತವಾಗಿ ನೊಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು/ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‍ಗಳವರೆಗೆ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್‍ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ(ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‍ಫರ್-ಡಿಬಿಟಿ) ಪದ್ಧತಿಯ ಮೂಲಕ ರೂ.2000/- ದಿಂದ ರೂ.11000/- ವರೆಗೆ 2021-22ನೇ ಆರ್ಥಿಕ ವರ್ಷದ ಸಾಲಿನಿಂದ ಜಾರಿಗೆ ಬರುವಂತೆ ಶಿಷ್ಯವೇತನದ ಹಣದ ಮೊತ್ತವನ್ನು ವಾರ್ಷಿಕ ಶಿಷ್ಯವೇತನದ ರೂಪದಲ್ಲಿ ಒದಗಿಸಲು ಮತ್ತು ಪಾವತಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿರುತ್ತದೆ.
ಇನ್ನು, ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಪ್ರೌಢಶಿಕ್ಷಣ (8 ರಿಂದ 10 ನೇ ತರಗತಿ ವರೆಗೆ) ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳಿಗೆ 2021-22 ನೇ ಆರ್ಥಿಕ ವರ್ಷದಿಂದ ವಾರ್ಷಿಕವಾಗಿ ರೂ.2000/- ಗಳ ವಿಧ್ಯಾರ್ಥಿ ವೇತನ ಸೌಲಭ್ಯ ಕೂಡ ವಿಸ್ತರಣೆ ಮಾಡಲಾಗಿದೆ.