ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ ನಡೆಸಿದ ರೈತರು!
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಬೆಳೆ ಹಾನಿಯಾಗಿದ್ದು, ಬೆಳೆ ಹಣ ರೈತರ ಖಾತೆಗೆ ಮಂಜೂರ ಮಾಡಬೇಕೆಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರೈತ ಪ್ರಾಂತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಯಾದಗಿರಿ ಜಿಲ್ಲಾ ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಾ ಬಂದಿದೆ. ಜಿಲ್ಲೆಯಲ್ಲಿ ಕುಡಿಯುವ ನೀರು ಸಿಗದಿರುವ ಪರಿಸ್ಥಿತಿಯಲ್ಲಿ ಕೃಷಿ ಮಾಡುವುದು ಕನಸಿನ ಮಾತಾಗಿದೆ.
ಕೂಡಲೇ ಈ ಭಾಗದ ರೈತರಿಗೆ ಸರ್ಕಾರ ಹೆಚ್ಚಿನ ಸೌಲಭ್ಯವನ್ನು ಕಲ್ಪಿಸುವ ಮೂಲಕ ರೈತರ ಹಿತವನ್ನು ಕಾಪಾಡಲು ಮುಂದಾಗಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.