ಬೆಂಗಳೂರು : ಕಳಸಾ-ಬಂಡೂರಿ ಯೋಜನೆಯ ಕುರಿತಾಗಿ ರೈತರ ಹೋರಾಟ 3 ನೇ ದಿನಕ್ಕೆ ಕಾಲಿಟ್ಟಿದ್ದು, ಈ ಯೋಜನೆಯ ಅಧಿಸೂಚನೆ ಹೊರಡಿಸುವಂತೆ ರೈತರು ಪಟ್ಟುಹಿಡಿದಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ರಾಷ್ಟ್ರಪತಿ, ರಾಜ್ಯಪಾಲರ ಮಧ್ಯಪ್ರವೇಶ ಮಾಡಬೇಕೆಂದು ರೈತರು ಒತ್ತಾಯಿಸಿದ್ದಾರೆ. ಅಧಿಸೂಚನೆ ಮೂಲಕ ಯೋಜನೆ ಜಾರಿಗೆ ಆಗ್ರಹಿಸಿ ರಾಜ್ಯಪಾಲರನ್ನು ಭೇಟಿಯಾಗಲು ನಮಗೆ ಅವಕಾಶ ಮಾಡಿಕೊಡಿ ಎಂದು ಧರಣಿ ನಡೆಸುತ್ತಿದ್ದಾರೆ.
ಇದೀಗ ಪ್ರತಿಭಟನಾ ಸ್ಥಳಕ್ಕೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ ನೀಡಿದ್ದು, ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.