ಪುರಭವನದಿಂದ ಮೈಸೂರು ಬ್ಯಾಂಕ್ ಸರ್ಕಲ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಕೋಡಿಹಳ್ಳಿ ಚಂದ್ರಶೇಖರ್, ಕುರುಬೂರು ಶಾಂತಕುಮಾರ್ ಸೇರಿದಂತೆ ವಿವಿಧ ರೈತ-ದಲಿತ ಸಂಘಟನೆಗಳ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 12 ಡಿಸಿಪಿಗಳು, 15 ಕ್ಕೂ ಅಧಿಕ ಎಸಿಪಿಗಳು, 100ಕ್ಕೂ ಹೆಚ್ಚು ಇನ್ಸ್ಪೆಕ್ಟರ್ಗಳು, 200ಕ್ಕೂ ಹೆಚ್ಚು ಸಬ್ ಇನ್ಸ್ಪೆಕ್ಟರ್ಗಳು ಹಾಗೂ ಕಾನ್ಸ್ಟೇಬಲ್ಗಳು ಸೇರಿದಂತೆ 4 ಸಾವಿರಕ್ಕೂ ಹೆಚ್ಚು ಪೊಲೀಸರ ಸರ್ಪಗಾವಲು ಹಾಕಲಾಗಿದೆ.
ನಿರಂತರ ಗಸ್ತು ತಿರುಗಾಟ:
ಹೊಯ್ಸಳ, ಚೀತಾ ವಾಹನಗಳ ಮೂಲಕ ನಿರಂತರ ಗಸ್ತು ತಿರುಗಾಟ ನಡೆಯಲಿದೆ. ಪ್ರತಿ ವಿಭಾಗದಲ್ಲಿಯೂ ಆಯಾ ಡಿಸಿಪಿಗಳ ನೇತೃತ್ವದಲ್ಲಿ ಭದ್ರತೆ ಇರಲಿದೆ. 30ಕ್ಕೂ ಹೆಚ್ಚು ಕೆಎಸ್ಆರ್ಪಿ ತುಕಡಿಗಳು, 30ಕ್ಕೂ ಹೆಚ್ಚು ಸಿಎಆರ್ ತುಕಡಿ ನಿಯೋಜಿಸಲಾಗಿದೆ. ಇದರ ಜೊತೆಗೆ ವಾಟರ್ ಜೆಟ್ ಇರಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.