ಬ್ಯಾಂಕ್ ಮುಂದೆ ರೈತರ ಪ್ರತಿಭಟನೆ

ಶುಕ್ರವಾರ, 7 ಡಿಸೆಂಬರ್ 2018 (19:14 IST)
ಕರ್ನಾಟಕ ಬ್ಯಾಂಕ್ ಅಧಿಕಾರಿಗಳ ಕಿರುಕುಳ ತಪ್ಪಿಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಬ್ಯಾಂಕಿನ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಬ್ಯಾಂಕಿನಲ್ಲಿ ರೈತರೊಬ್ಬರು ತಾವು ಪಡೆದಿದ್ದ 4 ಲಕ್ಷ ರೂ. ಗಳನ್ನು ಪಡೆದು 2 ಲಕ್ಷ ರೂ.ಗಳನ್ನು ಮರುಪಾವತಿ ಮಾಡಿದ್ದು, ಮತ್ತೆ 9 ಲಕ್ಷ ರೂ.ಗಳ ಸಾಲ ಬೇಕೆಂದು ಕೇಳಿದಾಗ ಬ್ಯಾಂಕ್ ಅಧಿಕಾರಿಗಳು ನೀಡುವುದಾಗಿ ಭರವಸೆ ನೀಡಿ, ಎಲ್ಲಾ ದಾಖಲೆಗಳನ್ನು ಪಡೆದು ಮಾಟ್ ಗೇಜ್ ಮಾಡಿಸಿಕೊಂಡು ಇದೀಗ ಹಣವನ್ನು ನೀಡಲು  ಆಗುವುದಿಲ್ಲಾ ಎಂದು ಹೇಳುತ್ತಿದ್ದಾರೆ. ಇದರಿಂದ ಹಣ ನಮ್ಮ ದಾಖಲೆಗಳನ್ನು ವಾಪಸ್ಸು ಪಡೆದಿದ್ದೇವೆ. ಆದರೆ ಬ್ಯಾಂಕ್ ಅಧಿಕಾರಿಗಳು ಮಾಟ್ ಗೇಜನ್ನು ರದ್ದುಪಪಡಿಸದೆ 3 ವರ್ಷದಿಂದ ಸತಾಯಿಸುತ್ತಿದ್ದಾರೆ. ಅಲ್ಲದೆ ಸಾಲ ಮರುಪಾವತಿ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.   ನ್ಯಾಯಾಲಯದಲ್ಲಿ ದಾವೆಯನ್ನು ಹೂಡುವುದಾಗಿ ಹೆದರಿಸುತ್ತಿದ್ದಾರೆ ಇದರಿಂದ ನಮಗೆ ಜೀವನ ನಡೆಸಲು ತುಂಬ  ತೊಂದರೆಯಾಗುತ್ತಿದೆ ಎಂದು ಪ್ರತಿಭಟನೆಯಲ್ಲಿ ತಮ್ಮ ಅಳಲು ತೊಡಿಕೊಂಡಿದ್ದಾರೆ.

ಜಿಲ್ಲೆಯು ಸತತ ಮೂರ್ನಾಲ್ಕು ವರ್ಷಗಳಿಂದ ಬರಗಾಲಕ್ಕೆ ತುತ್ತಾಗಿದೆ. ರೈತರು ಜೀವನ ನಡೆಸಲು ತುಂಬಾ ತೊಂದರೆಯಾಗುತ್ತಿದೆ. ಈಗಿರುವ ಪರಿಸ್ಥಿತಿಯಲ್ಲಿ ಜೀವನ ನಡೆಸುವುದೆ ಕಷ್ಟಕರವಾಗಿದೆ. ಇದರಿಂದ ಸಾಲವನ್ನು ತೀರಿಸಲು ಎಲ್ಲಿಂದ ಸಾಧ್ಯ. ರಾಜ್ಯದ ಮುಖ್ಯಮಂತ್ರಿಗಳು ರೈತರ ಸಾಲ  ಮನ್ನಾ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಆದರೆ ಇದುವರೆಗೂ ಯಾವೊಬ್ಬ ರೈತರ ಸಾಲ ಮನ್ನಾ ಮಾಡಿಲ್ಲಾ. ಅಧಿಕಾರಿಗಳ ಕಿರುಕುಳ ತಪ್ಪಿಲ್ಲಾ ಎಂದು ಪ್ರತಿಭಟನೆ ಮಾಡುವ ಮೂಲಕ ತಮ್ಮ ಅಳಲನ್ನು ವ್ಯಕ್ತಪಡಿಸಿದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ