ಮಹಿಳೆ ಬಗ್ಗೆ ಹೇಳಿಕೆ ನೀಡಿದ ಸಿಎಂ ಕುಮಾರಸ್ವಾಮಿ ವಿರುದ್ಧ ರೈತರ ಪ್ರತಿಭಟನೆ
ಸೋಮವಾರ, 19 ನವೆಂಬರ್ 2018 (10:01 IST)
ಬೆಂಗಳೂರು: ಕೃಷಿ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಗೆ ನಾಲ್ಕು ವರ್ಷ ಎಲ್ಲಿ ಮಲಗಿದ್ದೆ ಎಂದು ಪ್ರಶ್ನಿಸಿದ್ದ ಸಿಎಂ ಕುಮಾರಸ್ವಾಮಿ ವಿರುದ್ಧ ಇಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ಬೆಳಗಾವಿಯಲ್ಲೂ ಸಿಎಂ ವಿರುದ್ಧ ಪ್ರತಿಭಟನೆಗಳು ಜೋರಾಗಿದ್ದು, ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಸಿಎಂ ತಮ್ಮ ಹೇಳಿಕೆಗೆ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ರೈತ ಹೋರಾಟಗಾರರು ಆಗ್ರಹಿಸಿದ್ದಾರೆ.
ಇದಲ್ಲದೆ, ಕಬ್ಬು ಬೆಳೆಗಾರರು ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದು, ಇಲ್ಲಿ ಖಾಕಿ ಸರ್ಪಗಾವಲು ಹಾಕಲಾಗಿದೆ. ಸಾಲಮನ್ನಾ, ಕಬ್ಬಿಗೆ ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದ ಬಳಿ ಜಮಾಯಿಸಿದ್ದು, ಪ್ರತಿಭಟನೆಗೆ ಸಜ್ಜಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.