ಹೂ ಕೀಳಲು ಹೋಗಿ ತಂದೆ-ಮಗ ದುರಂತ ಸಾವು

ಗುರುವಾರ, 24 ಆಗಸ್ಟ್ 2023 (17:20 IST)
ವರಮಹಾಲಕ್ಷ್ಮೀ ಹಬ್ಬಕ್ಕೆಂದು ತಾವರೆ ಹೂವು ಕೀಳಲು ಹೋಗಿ ತಂದೆ-ಮಗ ದುರಂತ ಅಂತ್ಯ ಕಂಡಿದ್ದಾರೆ. ತಾವರೆ ಹೂವು ಕೀಳಲು ಹೋಗಿ ತಂದೆ, ಮಗ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿಗಳಾದ ಪುಟ್ಟರಾಜು, ಮಗ ಕೇಶವ ಮೃತ ದುರ್ದೈವಿಗಳು. ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂ ತಂದು ಮಾರಾಟ ಮಾಡಲು ತಂದೆ ಮಗ ಪ್ಲಾನ್​ ಮಾಡಿದ್ದರು. ಹೀಗಾಗಿ ಹೂ ತರಲು ಭೂಚನಹಳ್ಳಿ ಕೆರೆಗೆ ಹೋಗಿದ್ದಾರೆ. ಮೊದಲು ಹೂ ಕೀಳಲು ಪುತ್ರ ಕೇಶವ ಕೆರೆಗೆ ಇಳಿದಿದ್ದಾನೆ. ಆದ್ರೆ, ಏಕಾಏಕಿ ನೀರಿನಲ್ಲಿ ಮುಳುಗಿದ್ದಾನೆ. ಕೂಡಲೇ ತಂದೆ ಪುಟ್ಟರಾಜು ಸಹ ಪುತ್ರನನ್ನು ರಕ್ಷಿಸಲು ನೀರಿಗಿಳಿದಿದ್ದಾರೆ. ಆದ್ರೆ, ದುರದೃಷ್ಟವಶಾತ್​ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ