ಮಗಳ ಅಶ್ಲೀಲ ಪೋಸ್ಟ್ ಖಂಡಿಸಿದ್ದಕ್ಕೆ ತಂದೆ ಹತ್ಯೆ

ಬುಧವಾರ, 28 ಡಿಸೆಂಬರ್ 2022 (16:07 IST)
ತನ್ನ ಮಗಳ ಅಶ್ಲೀಲ ವಿಡಿಯೋವನ್ನು ಪ್ರಸಾರ ಮಾಡಿದ್ದನ್ನು ವಿರೋಧಿಸಿದ ಗಡಿ ಭದ್ರತಾ ಪಡೆ ಸಿಬ್ಬಂದಿಯನ್ನು ಥಳಿಸಿ ಕೊಂದಿರುವ ಘಟನೆ ಗುಜರಾತ್‌ನ ನಾಡಿಯಾಡ್‌ನಲ್ಲಿ ನಡೆದಿದೆ. ಚಕ್ಲಾಸಿ ಗ್ರಾಮದಲ್ಲಿ 15 ವರ್ಷದ ಹುಡುಗ, ಬಾಲಕಿಯ ಅಶ್ಲೀಲ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ್ದ. ಇದಕ್ಕೆ ಬಾಲಕಿಯ ತಂದೆ ಯೋಧ ಮೆಲ್ಜಿಭಾಯಿ ವಘೇಲಾ ಬಾಲಕನ ಮನೆಗೆ ತೆರಳಿ ಹುಡುಗನ ನಡೆಯನ್ನು ಖಂಡಿಸಿದ್ದಾರೆ. ಈ ವೇಳೆ ಹುಡುಗನ ಮನೆಯವರು ಯೋಧನ ಮೇಲೆ ಹಲ್ಲೆ ನಡೆಸಿದ್ದಾರೆ. ವರದಿಗಳ ಪ್ರಕಾರ, ಹುಡುಗ ಹಾಗೂ ಬಾಲಕಿ ಒಂದೇ ಶಾಲೆಯಲ್ಲಿ ಓದುತ್ತಿದ್ದು, ಇಬ್ಬರೂ ಸಂಬಂಧವನ್ನು ಹೊಂದಿದ್ದರು. ಆದರೆ ತನ್ನ ಮಗಳ ಅಶ್ಲೀಲ ವಿಡಿಯೋವನ್ನು ಪೋಸ್ಟ್ ಮಾಡಿದ್ದಕ್ಕೆ ಬಿಎಸ್‌ಎಫ್ ಜವಾನ ತನ್ನ ಕುಟುಂಬದೊಂದಿಗೆ ಹುಡುಗನ ಮನೆಗೆ ಮಾತನಾಡಲು ತೆರಳಿದ್ದರು ಎಂದು ತಿಳಿದುಬಂದಿದೆ. ಯೋಧ ತನ್ನ ಪತ್ನಿ, ಇಬ್ಬರು ಪುತ್ರರು ಹಾಗೂ ಸೋದರಳಿಯನೊಂದಿಗೆ ಯುವಕನ ಮನೆಗೆ ತೆರಳಿದ್ದರು. ಆದರೆ ಹುಡುಗನ ಕುಟುಂಬದವರು ಅವರನ್ನು ನಿಂದಿಸಲು ಪ್ರಾರಂಭಿಸಿದ್ದಾರೆ. ಇದನ್ನು ವಿರೋಧಿಸಿದಾಗ ಹುಡುಗನ ಮನೆಯವರು ಯೋಧನ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 7 ಜನರನ್ನು ಬಂಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ