14 ವರ್ಷದ ಪುತ್ರಿಗೆ ಅಶ್ಲೀಲ ವಿಡಿಯೋ ತೋರಿಸಿ ಕಾಮದಾಟ ಆಡಿದ ತಂದೆ

ಭಾನುವಾರ, 2 ಏಪ್ರಿಲ್ 2017 (11:34 IST)
ನಗರದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ಬಹಿರಂಗವಾಗಿದೆ. 14 ವರ್ಷ ವಯಸ್ಸಿನ ಪುತ್ರಿಗೆ ಅಶ್ಲೀಲ ವಿಡಿಯೋ ತೋರಿಸಿ ಕಾಮದಾಟ ಆಡಿದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
 
ಕಳೆದ ಕೆಲ ತಿಂಗಳುಗಳಿಂದ ಪುತ್ರಿಗೆ ಸೆಕ್ಸ್ ವಿಡಿಯೋ ತೋರಿಸಿ ಲೈಂಗಿಕ ಸುಖ ನೀಡುವಂತೆ ಒತ್ತಾಯಿಸುತ್ತಿದ್ದ. ಬಾಲಕಿ ಒಪ್ಪದಿದ್ದಾಗಿ ಅತ್ಯಾಚಾರವೆಸಗಿದ್ದಾನೆ. ನಂತರ ಬಾಲಕಿಯನ್ನು ಬೆದರಿಸಿ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಮನೆಯಲ್ಲಿ ತಾಯಿಯಿಲ್ಲದ ವೇಳೆಯಲ್ಲಿ ಪುತ್ರಿಗೆ ಸೆಕ್ಸ್ ವಿಡಿಯೋ ತೋರಿಸಿ ಆಕೆಯೊಂದಿಗೆ ಸೆಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಗ್ಯದಲ್ಲಿ ಏರುಪೇರಾದ ನಂತರ ಬಾಲಕಿ, ತಾಯಿಗೆ ತಂದೆಯ ಕಾಮ ಪುರಾಣವನ್ನು ತಿಳಿಸಿದ್ದಾಳೆ. ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿ ತಂದೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ