ತಂದೆ ಕಲಿಸಿದ ಸಂಸ್ಕಾರ ಇದೇನಾ?: ದಿನೇಶ್ ಗುಂಡೂರಾವ್‌ಗೆ ಪ್ರತಾಪ್ ಸಿಂಹ

ಬುಧವಾರ, 22 ಫೆಬ್ರವರಿ 2017 (12:44 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಮಾನಸಿಕ ಅಸ್ವಸ್ಥರು ಎಂದು ಟೀಕಿಸಿದ್ದ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆಯನ್ನು ಸಂಸದ ಪ್ರತಾಪ್ ಸಿಂಹ್ ತೀವ್ರವಾಗಿ ಖಂಡಿಸಿದ್ದಾರೆ.
 
ಮೊದಲು ದಿನೇಶ್ ಮಾನಸಿಕ ಸ್ಥಿತಿ ಸರಿಯಿದೆಯೋ ಇಲ್ಲವೋ ಎನ್ನುವ ಬಗ್ಗೆ ಪರೀಕ್ಷೆ ನಡೆಸಬೇಕು. ಅವರ ಮನೆಯವರು ಇಂತಹ ಸಂಸ್ಕಾರ ಕಲಿಸಿದ್ದಾರಾ? ಎಂದು ವಾಗ್ದಾಳಿ ನಡೆಸಿದ್ದಾರೆ. ಅವರ ತಂದೆ ಕಲಿಸಿದ ಸಂಸ್ಕಾರ ಇದೇನಾ? ವಾಗ್ದಾಳಿ ನಡೆಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಯಾರ ಮಾತನ್ನು ಕೇಳುತ್ತಿಲ್ಲ. ಆದ್ದರಿಂದಲ್ ಸಚಿವ ಪರಮೇಶ್ವರ್ ಖಾತೆ ಬದಲಾವಣೆ ಮಾಡಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ ಎಂದು ಟಾಂಗ್ ನೀಡಿದರು.
 
ಕಾಂಗ್ರೆಸ್ ಮುಖಂಡರು ಇಂತಹ ಹೇಳಿಕೆಗಳನ್ನು ಮುಂದುವರಿಸಿದಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯಾಧ್ಯಂತ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ