ಕಾಮತೃಷೆಯನ್ನು ತೀರಿಸಿಕೊಳ್ಳಲು ಮಗಳನ್ನೇ ಬಳಸಿಕೊಳ್ಳುತ್ತಿದ್ದ ಅಪ್ಪ

ಶುಕ್ರವಾರ, 21 ಸೆಪ್ಟಂಬರ್ 2018 (07:03 IST)
ಮುಂಬೈ : 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ನಾಲ್ಕು ವರ್ಷಗಳಿಂದ ಆಕೆಯ ತಂದೆಯೇ ಅತ್ಯಾಚಾರ ಎಸಗುತ್ತಿದ್ದು, ಇದೀಗ ಕಾಮುಕ ತಂದೆಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.

ಏಳು ವರ್ಷಗಳಿಂದ ಸಂತ್ರಸ್ತ ಬಾಲಕಿಯ ತಾಯಿ ತನ್ನ ಗಂಡನಿಂದ ದೂರವಾಗಿದ್ದಳು. ಆದಕಾರಣ ಬಾಲಕಿ ತನ್ನ ತಂದೆಯ ಜೊತೆಗೆ ವಾಸವಾಗಿದ್ದಳು. ಆದರೆ ತಂದೆ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ಕಳೆದ ನಾಲ್ಕು ವರ್ಷಗಳಿಂದ ಮಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದ ಎಂದು ವರದಿಯಾಗಿದೆ

 

ಪ್ರತಿದಿನ ತಂದೆಯ ಕಿರುಕುಳ ತಾಳಲಾರದೆ ಬೇಸತ್ತ ಬಾಲಕಿ, ನೆರೆ ಮನೆಯವರಲ್ಲಿ ಈ ವಿಚಾರವನ್ನು ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿಕೊಂಡಿದ್ದಾಳೆ. ಬಾಲಕಿಯ ಮನವಿಯಂತೆ ವ್ಯಕ್ತಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

 

ಈ ಕುರಿತು ಬುಧವಾರ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಗುರುವಾರ ಆರೋಪಿ ತಂದೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನ ವಿರುದ್ಧ ಐಪಿಸಿ 376 (ಅತ್ಯಾಚಾರ) ಹಾಗೂ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ