ಸಿದ್ದರಾಮಯ್ಯಗೆ ಸೋಲಿನ ಭಯ– ಸಿ.ಟಿ.ರವಿ

ಶುಕ್ರವಾರ, 12 ಜನವರಿ 2018 (14:09 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ ಕಾಡುತ್ತಿದ್ದು, ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಬಜರಂಗದಳದವರು ಉಗ್ರಗಾಮಿಗಳು ಎಂದು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಶಾಸಕ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಮುಖ್ಯಮಂತ್ರಿ ಇಂತಹ ಹೇಳಿಕೆಗಳನ್ನು ನೀಡಿದ್ದಾರೆ. ಆರೋಪ ಮಾಡಲು ಸಾಕ್ಷ್ಯಗಳಿದ್ದರೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಕ್ಷಮೆ ಯಾಚನೆ ಮಾಡಬೇಕು. ಜಾತಿ ಹೆಸರಿನಲ್ಲಿ ರಾಜಕಾರಣ ಮಾಡುವುದನ್ನು ಕಾಂಗ್ರೆಸ್‌ ನಿಲ್ಲಿಸಬೇಕು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ