ಮತ್ತೆ ಭೂಕಂಪದ ಆತಂಕ ಶುರು!

ಶನಿವಾರ, 15 ಅಕ್ಟೋಬರ್ 2022 (11:04 IST)
ವಿಜಯಪುರ : ಐತಿಹಾಸಿಕ ಜಿಲ್ಲೆಯಲ್ಲಿ ಮತ್ತೆ ಭೂಕಂಪದ ಆತಂಕ ಶುರುವಾಗಿದೆ. ಪದೇ ಪದೇ ಭೂಕಂಪನ ಆಗುತ್ತಿರುವುದಕ್ಕೆ ಜನ ಬೆಚ್ಚಿಬಿದ್ದಿದ್ದಾರೆ.
 
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲೆ ನಿರಂತರ ಮಳೆ ಸುರಿಯುತ್ತಿದೆ. ಈ ನಡುವೆ ಬುಧವಾರ ರಾತ್ರಿ 11:42ಕ್ಕೆ ಹಾಗೂ ಗುರುವಾರ ಬೆಳಗ್ಗೆ 6:19ಕ್ಕೆ ನಗರದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಒಂದೇ ರಾತ್ರಿಯಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ.

ನಗರದ ರೈಲ್ವೆಸ್ಟೇಷನ್ ಏರಿಯಾ, ರಂಭಾಪುರ ಬಡಾವಣೆ, ಬಸವೇಶ್ವರ ನಗರ, ಗೋಳಗುಮ್ಮಟ ಏರಿಯಾ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದೆ. ಪದೇ ಪದೇ ಈ ರೀತಿ ಭೂಮಿ ಕಂಪಿಸುತ್ತಿರುವುದರಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ