ರಾಜಧಾನಿಯಲ್ಲಿ ಒಬ್ಬಂಟಿಯಾಗಿ ಓಡಾಡಲು ಭಯ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

Sampriya

ಸೋಮವಾರ, 14 ಅಕ್ಟೋಬರ್ 2024 (18:01 IST)
ಬೆಂಗಳೂರು:  ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕನಿಷ್ಠ ಪಕ್ಷ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿಯೂ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ರಾತ್ರಿಯಾದರೆ ಪುಂಡರು, ಕಿಡಿಗೇಡಿಗಳು ನಡು ರಸ್ತೆಯಲ್ಲಿ ಅಟ್ಟಹಾಸ ಮೆರೆಯುತ್ತಿರುವುದು ದಿನೇ ದಿನೇ ವರದಿಯಾಗುತ್ತಲೇ ಇವೆ.

ತಡರಾತ್ರಿ ಕಾಡುಬೀಸನಹಳ್ಳಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಗಳನ್ನು ಅಡ್ಡಗಟ್ಟಿ ಪುಂಡನೊಬ್ಬ ಬೆದರಿಸುತ್ತಿರುವ ಘಟನೆ ಉದ್ಯೋಗಿಗಳು, ಮಹಿಳೆಯರು, ನಾಗರೀಕರು ಬೆಂಗಳೂರಿನಲ್ಲಿ ಒಬ್ಬಂಟಿಯಾಗಿ ಓಡಾಡಲೂ ಭಯ ಪಡುವ ಆತಂಕದ ಪರಿಸ್ಥಿತಿ ಸೃಷ್ಟಿಯಾಗಿದೆ.

ಕಳೆದ ಒಂದೂವರೆ ವರ್ಷದ ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಳಿತಪ್ಪಿರುವುದಕ್ಕೆ ಸಾಕ್ಷಿಯಾಗಿ ಸಂಭವಿಸಿರುವ ಅನೇಕ ದುರ್ಘಟನೆಗಳು ನಮ್ಮ ಮುಂದಿವೆ, ಅಭಿವೃದ್ಧಿಯತ್ತ ಒಂದೇ ಒಂದು ಹೆಜ್ಜೆ ಇಡದ ಭ್ರಷ್ಟ ಹಗರಣಗಳ ಸರಮಾಲೆ ಹೊತ್ತ ರಾಜ್ಯ ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆಯ ವಿಷಯದಲ್ಲಾದರೂ ಜನರಿಗೆ ನೆಮ್ಮದಿ ಕೊಡುವ ಪ್ರಮಾಣಿಕ ಪ್ರಯತ್ನ ಮಾಡಲಿ ಎಂದು ಬರೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ