ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗಳನ್ನು ಕೊಂದು, ಆತ್ಮಹತ್ಯೆಗೆ ಶರಣಾದ ಪತ್ನಿ

Sampriya

ಸೋಮವಾರ, 17 ಫೆಬ್ರವರಿ 2025 (16:15 IST)
ಬೆಂಗಳೂರು: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ತನ್ನ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬಗಲಗುಂಟೆಯಲ್ಲಿ ನಡೆದಿದೆ.

ಶೃತಿ (33) ಆತ್ಮಹತ್ಯೆ ಮಾಡಿಕೊಂಡ ಪತ್ನಿ. ಆತ್ಮಹತ್ಯೆಗೆ ಶರಣಾಗುವ ಮುನ್ನಾ ತನ್ನ 5ವರ್ಷದ ಮಗಳು ರೋಶಿನಿಯನ್ನು ನೇಣು ಹಾಕಿದ್ದಳು. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಈಕೆ ಪಾವಘಡದ ಗುಂಡಾರನಹಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿದ್ದರು.

ಪತಿ ಗೋಪಾಲಕೃಷ್ಣನ ಅಕ್ರಮ ಸಂಬಂಧಕ್ಕೆ ಬೇಸತ್ತಿದ್ದ ಶೃತಿ, ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಭಾನುವಾರ ಸಂಜೆ ಘಟನೆ ನಡೆದಿದೆ. ಸ್ಥಳಕ್ಕೆ ಬಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಪೊಲೀಸರು ಒಪ್ಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ