ಫೆಂಗಲ್ ಎಫೆಕ್ಟ್‌: ಚೆನ್ನೈನಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು, ಪ್ರವಾಹದಲ್ಲಿ ತೇಲಿಬಂದ ಶವ

Sampriya

ಶನಿವಾರ, 30 ನವೆಂಬರ್ 2024 (18:39 IST)
ತಮಿಳುನಾಡು: ಫೆಂಗಲ್ ಚಂಡಮಾರುತ ಅಬ್ಬರಕ್ಕೆ ಎಟಿಎಂ ಒಳಗೆ ವಿದ್ಯುತ್ ಆಘಾತಕ್ಕೆ ಒಳಗಾಗಿ ಸಾವನ್ನಪ್ಪಿ, ಶವ ತೇಲಾಡಿ ಬಂದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.  

ಫೆಂಗಲ್ ಎಂಬ ಪ್ರಬಲ ಚಂಡಮಾರುತದ ಅಬ್ಬರಕ್ಕೆ ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಮನೆಯಿಂದ ಅನಗತ್ಯವಾಗಿ ಹೊರಬರದಂತೆ  ಸರ್ಕಾರ ಸೂಚನೆ ನೀಡಿದೆ.

ವಿದ್ಯುತ್ ಸ್ಪರ್ಶಕ್ಕೆ ವ್ಯಕ್ತಿ ಸಾವನ್ನಪ್ಪಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಈ ವಾರದ ಆರಂಭದಲ್ಲಿ ಶ್ರೀಲಂಕಾದ ಕರಾವಳಿಯಲ್ಲಿ ಫೆಂಗಲ್ ಚಂಡಮಾರುತಕ್ಕೆ ಆರು ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.

ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಜೆ 7 ಗಂಟೆಯವರೆಗೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ನಗರದ ಹಲವೆಡೆ ಜಲಾವೃತವಾಗಿರುವ ಬಗ್ಗೆ ವರದಿಯಾಗಿದೆ.

ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಥವಾ IMD ಮುನ್ಸೂಚನೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ