SSLC ಪರೀಕ್ಷೆಗೆ ಹಬ್ಬದ ವಾತಾವರಣ

ಗುರುವಾರ, 21 ಮಾರ್ಚ್ 2019 (19:22 IST)
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಹೋಗಲಾಡಿಸಲು ಹಬ್ಬದ ವಾತಾವರಣ ಅಲ್ಲ ನಿರ್ಮಾಣವಾಗಿತ್ತು.

ಮಂಗಳೂರು ಉತ್ತರ ಮತ್ತು ದಕ್ಷಿಣ ವಲಯದಲ್ಲಿ ತಲಾ 21 ಪರೀಕ್ಷಾ ಕೇಂದ್ರದಲ್ಲಿ ಇವತ್ತು ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಇಂದು ಪ್ರಥಮ ಭಾಷಾ ಪರೀಕ್ಷೆ ನಡೆಯಿತು. ಪರೀಕ್ಷಾ ಕೇಂದ್ರಗಳ ಪೈಕಿ ಬಹುತೇಕ ಕಡೆ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಬ್ಯಾನರ್‌ ಅಳವಡಿಸಲಾಗಿತ್ತು.

ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಕಲ್ಪಿಸಿರುವ ಜತೆಗೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಹೋಗಲಾಡಿಸಿ, ಹಬ್ಬದ ವಾತಾವರಣ ನಿರ್ಮಾಣ ಮಾಡಲಾಗಿತ್ತು. ಕೆಲವೆಡೆ ಸ್ವಾಗತ ಫಲಕ, ಬ್ಯಾನರ್ ಅಳವಡಿಕೆ ಮಾಡಲಾಗಿತ್ತು.

ಚೆಂಡೆ ವಾದ್ಯ, ಗುಲಾಬಿ ಹೂ, ಶಿಕ್ಷಕ ವರ್ಗದಿಂದ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಸಿದ್ಧತೆ ನಡೆದಿತ್ತು.

ಖಾಸಗಿಯಾಗಿ ಎಸ್‌ಡಿಎಂಸಿಯಿಂದ ವಿದ್ಯಾರ್ಥಿಗಳಿಗೆ ಪಾನೀಯ, ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷೆ ಬರೆಯಲು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ