ಸರಕಾರದ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಾಪು

ಭಾನುವಾರ, 16 ಡಿಸೆಂಬರ್ 2018 (18:08 IST)
ಸಾರಿಗೆ ಸಂಸ್ಥೆಯ ನೌರರ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನು ಪಾಪು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ನಾಡೋಜ ಪಾಟೀಲ್ ಪುಟ್ಟಪ್ಪ ಹೇಳಿಕೆ ನೀಡಿದ್ದು, ಸಾರಿಗೆ ನೌಕರರ ಪಿಂಚಣಿ ಹಾಗೂ ವೇತನ ತಾರತಮ್ಯ ನಿವಾರಿಸಬೇಕು. ರಾಜ್ಯ ಸರ್ಕಾರದ ಹಿಡಿತದಲ್ಲಿರುವ ಸಾರಿಗೆ ಸಂಸ್ಥೆಯನ್ನು ಸರಕಾರಿ ಇಲಾಖೆ ಎಂದು ಪರಿಗಣಿಸಬೇಕು. ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಕರ್ತವ್ಯದ ಮೇಲೆ ಸಾವನ್ನಪ್ಪಿದ್ದರೆ 30 ಲಕ್ಷ‌ ರೂ. ಪರಿಹಾರ ನೀಡಬೇಕು. 90 ದಿನಗಳಲ್ಲಿ ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದಿದ್ದಾರೆ.

ಸರ್ಕಾರ ಸಾರಿಗೆ ನೌಕರರ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಪಾಟೀಲ್ ಪುಟ್ಟಪ್ಪನವರ ನೇತೃತ್ವದಲ್ಲಿ ಕಪ್ಪು ಬಟ್ಟೆ ಕಟ್ಟಿಕೊಂಡು ಹೋರಾಟ ಮಾಡಲು ನೌಕರರು ನಿರ್ಧಾರ ಮಾಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ